ಕ್ರೀಡಾ ವಿದ್ಯಾರ್ಥಿಗಳ ಸಾಧನೆ

Published on

ಕೊಪ್ಪಳ: ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಜರುಗಿದ ಮಿನಿ ಒಲಂಪಿಕ್​ ವಾಲಿಬಾಲ್​ ಪಂದ್ಯಾವಳಿಯಲ್ಲಿ ನಗರದ ಕ್ರೀಡಾ ವಸತಿ ನಿಲಯದ ವಿದ್ಯಾರ್ಥಿಗಳು ಸಾಧನೆ ಮಾಡಿ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.

ನ.14ರಿಂದ 17ವರೆಗೆ ನಡೆದ ಪಂದ್ಯಾವಳಿಯಲ್ಲಿ ಬಾಲಕಿಯರು ಪ್ರಥಮ ಸ್ಥಾನ ಮತ್ತು ಬಾಲಕರು ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ. ಕ್ರೀಡಾಪಟುಗಳು ರಾಜ್ಯ, ರಾಷ್ಟ್ರಮಟ್ಟದ ಕ್ರೀಡೆಯಲ್ಲಿ ಭಾಗವಹಿಸಿ ಜಿಲ್ಲೆಗೆ ಕೀರ್ತಿ ತರಲಿ ಎಂದು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ವಿಠ್ಠಲ ಜಾಬಗೌಡರ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net