

ಕೊಪ್ಪಳ: ಮೇ 26ರಿಂದ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ-2 ಆರಂಭವಾಗಲಿದ್ದು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ನಲಿನ್ ಅತುಲ್ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪರೀಕ್ಷಾ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.
ಮೇ 26 ರಿಂದ ಜೂನ್ 2ರ ವರೆಗೆ ಪರೀಕ್ಷೆ ಜರುಗಲಿವೆ. ಅಕ್ರಮ ಚಟುವಟಿಕೆಗೆ ಅವಕಾಶ ಕೊಡದೇ ಮುಕ್ತ ಹಾಗೂ ನ್ಯಾಯ ಸಮ್ಮತವಾಗಿ ನಡೆಸಿ. ವಿದ್ಯಾರ್ಥಿಗಳಿಗೆ ಸೂಕ್ತ ಆಸನ, ಕುಡಿವ ನೀರು ಮತ್ತು ಶೌಚಗೃಹ ಕಲ್ಪಿಸಲು ಆಯಾ ಕೇಂದ್ರದ ಮುಖ್ಯಸ್ಥರು ಅಗತ್ಯ ಕ್ರಮ ಕೈಗೊಳ್ಳಬೇಕು. ಪ್ರಶ್ನೆಪತ್ರಿಕೆ ಖಜಾನೆಯಲ್ಲಿ ಠೇವಣಿ ಇರಿಸಿ. ಪರೀಕ್ಷಾ ದಿನದಂದು ಖಜಾನೆಯಿಂದ ನಿಗದಿತ ಅವಧಿಯೊಳಗೆ ಕೇಂದ್ರಗಳಿಗೆ ತಲುಪಿಸಿ. ಮಾರ್ಗಾಧಿಕಾರಿಗಳು ನಿಮ್ಮ ಕೆಲಸ ಜವವಾಬ್ದಾರಿಯಿಂದ ನಿರ್ವಹಿಸಿ. ಪೊಲೀಸ್ ಬಂದೋಬಸ್ತ್, ಸಾರಿಗೆ ಬಸ್ ಸೌಕರ್ಯ ಕಲ್ಪಿಸಿ. ವಿದ್ಯಾರ್ಥಿಗಳು, ಪರೀಕ್ಷಾ ಸಿಬ್ಬಂದಿ ಹೊರತು ಪಡಿಸಿ ಇತರರಿಗೆ ಕೇಂದ್ರದಲ್ಲಿ ಅವಕಾಶವಿರುವುದಿಲ್ಲ. 200 ಮೀಟರ್ ಸುತ್ತಲು ನಿಫಿೇಧಾಜ್ಞೆ ಇರಲಿದೆ. ಸರ್ಕಾರದ ಸೂಚನೆಗಳನ್ನು ಎಲ್ಲ ಅಧಿಕಾರಿಗಳು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಿದರು.
ಡಿಡಿಪಿಐ ಶ್ರೀಶೈಲ ಬಿರಾದಾರ ಮಾತನಾಡಿ, ಪರೀಕ್ಷೆ-2ಕ್ಕೆ ಜಿಲ್ಲೆಯಲ್ಲಿ 10,351 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಗಂಗಾವತಿ ತಾಲೂಕಿನ 10, ಕೊಪ್ಪಳ 10, ಕುಫ್ಟಿಗಿ 8 ಹಾಗೂ ಯಲಬುರ್ಗಾ ತಾಲೂಕಿನ 7 ಸೇರಿ 35 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿವೆ. ಪ್ರತಿ ಕೇಂದ್ರಕ್ಕೆ ಒಬ್ಬ ಮುಖ್ಯ ಅಧೀಕ್ಷಕ ಹಾಗೂ ಪ್ರಶ್ನೆಪತ್ರಿಕೆ ಅಭಿರಕ್ಷಕನನ್ನು ನೇಮಿಸಲಾಗಿದೆ. ಕೊಪ್ಪಳ, ಗಂಗಾವತಿ, ಕುಫ್ಟಿಗಿ ಮತ್ತು ಯಲಬುರ್ಗಾ ಕ್ಷೇತ್ರ ಶಿಕ್ಷಣಾಧಿಕಾರಿಗಳು ಆಯಾ ವಿಭಾಗಗಳ ಪ್ರಶ್ನೆ ಪತ್ರಿಕೆ ಪಾಲಕರಾಗಿ ನೇಮಿಸಲಾಗಿದೆ ಎಂದು ಮಾಹಿತಿ ನೀಡಿದರು.
ಡಿಡಿಪಿಯು ಎಚ್.ಜಿ. ಜಗದೀಶ, ಬಿಇಒಗಳು, ವಿಫಿಯ ಪರಿವೀಕ್ಷಕರು, ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರು, ತಾಲೂಕು ನೋಡಲ್ ಅಧಿಕಾರಿಗಳು ಇದ್ದರು.