

ಕೊಪ್ಪಳ: ಕೊಪ್ಪಳ ವೈದ್ಯಕಿಯ ವಿಜ್ಞಾನ ಸಂಸ್ಥೆಯ ಅಧೀನದಲ್ಲಿ 100 ಕೋಟಿ ರೂ.ವೆಚ್ಚದಲ್ಲಿ ಸೂಪರ್ ಸ್ಪೆಫಿಾಲಿಟಿ ಆಸ್ಪತ್ರೆ ಪ್ರಾರಂಭಿಸುವ ಬಗ್ಗೆ ಬಜೆಟ್ನಲ್ಲಿ ಘೋಷಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ತಿಳಿಸಿದ್ದಾರೆ.
ಬೂದುಗುಂಪ ಗ್ರಾಮದಲ್ಲಿ ಕುರಿ ಮತ್ತು ಮೇಕೆ ಮಾರುಕಟ್ಟೆಯನ್ನು ಕೆಕೆಆರ್ ಡಿಬಿ ವತಿಯಿಂದ 25 ಕೋಟಿ ರೂ. ವೆಚ್ಚದಲ್ಲಿ ಅಗತ್ಯ ಮೂಲಸೌಲಭ್ಯಗಳೊಂದಿಗೆ ಸ್ಥಾಪನೆ ಉತ್ತಮವಾದ ನಿರ್ಧಾರ. ಯಲಬುರ್ಗಾದಲ್ಲಿ ಆರು ಕೋಟಿ ವೆಚ್ಚದಲ್ಲಿ ಹೊಸ ನರ್ಸಿಂಗ್ ಕಾಲೇಜನ್ನು ಕೆಕೆಆರ್ ಡಿಬಿ ಅನುದಾನದಲ್ಲಿ ಪ್ರಾರಂಭಿಸುವ ಯೋಜನೆ ಸಂತಸ ತರಿಸಿದೆ ಎಂದರು.
ಕಳೆದ ಸಾಲಿನ ಆಯವ್ಯಯದಲ್ಲಿ ಘೋಷಿಸಲಾದ ಕೊಪ್ಪಳದ ತಳಕಲ್ ನಲ್ಲಿರುವ ಬಹು ಕೌಶಲ್ಯ ಅಭಿವೃದ್ಧಿ ಕೇಂದ್ರಕ್ಕೆ 90 ಕೋಟಿ ಅನುದಾನ ಘೋಷಿಸಲಾಗಿತ್ತು. ಉಳಿದ ಅನುದಾನವನ್ನು ಒದಗಿಸಲಾಗುವುದು. ಯಲಬುರ್ಗಾದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ತಾಲ್ಲೂಕು ಕ್ರೀಡಾಂಗಣ ವನ್ನು ಅಭಿವೃದ್ಧಿಪಡಿಸಲಾಗುವ ಯೋಜನೆ ಘೋಫಿಣೆಗೆ ಮುಖ್ಯಮಂತ್ರಿಗಳಿಗೆ ಸಚಿವರು ಅಭಿನಂದನೆ ಸಲ್ಲಿಸಿದ್ದಾರೆ.