ಗಿಣಿಗೇರಾದಲ್ಲಿ ಮಕ್ಕಳ ಸಾಹಿತ್ಯ ಸಂಭ್ರಮ

students sahitya mela in ginigera village koppal school education department
ಕೊಪ್ಪಳ ತಾಲೂಕಿನ ಗಿಣಿಗೇರಾದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಮಕ್ಕಳ ಸಾಹಿತ್ಯ ಸಂಭ್ರಮ ಕಾರ್ಯಕ್ರಮವನ್ನು ಜಿಪಂ ಮುಖ್ಯ ಯೋಜನಾಧಿಕಾರಿ ಮಂಜುನಾಥ ಉದ್ಘಾಟಿಸಿದರು. ಗಿಣಿಗೇರಾ ಗ್ರಾಪಂ ಉಪಾಧ್ಯಕ್ಷ ಕರಿಯಪ್ಪ ಮೇಟಿ, ಬೇವಿನಹಳ್ಳಿ ಗ್ರಾಪಂ ಉಪಾಧ್ಯಕ್ಷ ಮುರಳೀಧರ, ತಾಪಂ ಇಒ ದುಂಡಪ್ಪ ತುರಾದಿ, ಸಹಾಯಕ ನಿರ್ದೇಶಕ ಮಹೇಶ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಹನುಮಂತಪ್ಪ ಇದ್ದರು.
Published on

ಕೊಪ್ಪಳ: ಮಕ್ಕಳಲ್ಲಿನ ಪ್ರತಿಭೆ ಗುರುತಿಸಲು ಶಿಬಿರಗಳು ಸಹಕಾರಿ ಎಂದು ಜಿಪಂ ಮುಖ್ಯ ಯೋಜನಾಧಿಕಾರಿ ಮಂಜುನಾಥ ಹೇಳಿದರು.
ತಾಲೂಕಿನ ಗಿಣಿಗೇರಾದಲ್ಲಿ ಜಿಪಂ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಬುಧವಾರ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಮಕ್ಕಳ ಸಾಹಿತ್ಯ ಸಂಭ್ರಮ ಕಾರ್ಯಕ್ರಮದ ಉದ್ಘಾಟಿಸಿ ಮಾತನಾಡಿದರು.

ಮಕ್ಕಳಲ್ಲಿನ ಪ್ರತಿಭೆಗಳನ್ನು ಗುರುತಿಸಿ ಹೊರತೆಗೆಯುವ ಪ್ರಯತ್ನವನ್ನು ಸಂಪನ್ಮೂಲ ವ್ಯಕ್ತಿಗಳು ಮಾಡಬೇಕು. ಮಕ್ಕಳಲ್ಲಿ ಅನೇಕ ಪ್ರತಿಭೆಗಳಿರುತ್ತವೆ. ಅವುಗಳನ್ನು ನಾವು ಗುರುತಿಸಬೇಕು. ಸೂಕ್ತ ವೇದಿಕೆ ಕಲ್ಪಿಸಿ ಸಹಕಾರ ನೀಡಬೇಕು. ಶಿಬಿರಗಳು ಪ್ರತಿಭೆ ಗುರುತಿಸಲು ಸಹಕಾರಿಯಾಗಲಿವೆ ಎಂದರು.
ಗಿಣಿಗೇರಾ ಗ್ರಾಪಂ ಉಪಾಧ್ಯಕ್ಷ ಕರಿಯಪ್ಪ ಮೇಟಿ ಮಾತನಾಡಿ, ಮಕ್ಕಳು ಈ ಶಿಬಿರದ ಪ್ರಯೋಜನ ಪಡೆದುಕೊಂಡು, ಸಮಾಜದಲ್ಲಿ ಉತ್ತಮ ನಾಗರಿಕರಾಗಿ ಬದುಕಿ ಎಂದರು.

ಶಿಕ್ಷಕರಾದ ಫಕೀರಪ್ಪ ಗುಳದಳ್ಳಿ ಪ್ರಾರ್ಥನೆಗೈದರು. ಹನುಮಂತಪ್ಪ ಕುರಿ ಸ್ವಾಗತಿಸಿದರು. ವಿರೇಶ ಮೇಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಾಣೇಶ ಪೂಜಾರ ನಿರೂಪಿಸಿದರು, ಯಲ್ಲಪ್ಪ ವಂದಿಸಿದರು.

ಬೇವಿನಹಳ್ಳಿ ಗ್ರಾಪಂ ಉಪಾಧ್ಯಕ್ಷ ಮುರಳೀಧರ, ತಾಪಂ ಇಒ ದುಂಡಪ್ಪ ತುರಾದಿ, ಸಹಾಯಕ ನಿರ್ದೇಶಕ ಮಹೇಶ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಹನುಮಂತಪ್ಪ, ಗ್ರಾಪಂ ಪಿಡಿಒಗಳಾದ ಗೀತಾ ಕುಮಾರಿ, ಮಂಜುಳಾ, ಗುರುಸಿದ್ದಪ್ಪ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net