ಶುದ್ಧ ಕುಡಿವ ನೀರು ಪುರೈಸಿ, ತಹಸೀಲ್ದಾರ್​ ವಿಠ್ಠಲ ಚೌಗಲಾ ಸೂಚನೆ

task fours meeting in koppal taluka panchayat tahasildara vittal chougala
ಕೊಪ್ಪಳದಲ್ಲಿ ಗುರುವಾರ ತಹಸೀಲ್ದಾರ್​ ವಿಠ್ಠಲ ಚೌಗಲಾ ಅಧ್ಯಕ್ಷತೆಯಲ್ಲಿ ತಾಲೂಕು ಮಟ್ಟದ ಟಾಸ್ಕ್​ಪೋರ್ಸ್​ ಸಭೆ ನಡೆಯಿತು. ತಾಪಂ ಇಒ ದುಂಡಪ್ಪ ತುರಾದಿ, ನಗರಸಭೆ ಆಯುಕ್ತ ಗಣಪತಿ ಪಾಟೀಲ್​ ಇದ್ದರು.
Published on

ಕೊಪ್ಪಳ: ಮಳೆಗಾಲ ಆರಂಭವಾಗಿದೆ. ಗ್ರಾಮಗಳಲ್ಲಿ ಚರಂಡಿ ಸ್ವಚ್ಛಗೊಳಿಸಿ. ಕಲುಷಿತ ನೀರು ಪೂರೈಕೆ ಆಗದಂತೆ ನೋಡಿಕೊಳ್ಳಿ. ಶುದ್ಧ ಕುಡಿವ ನೀರು ಪೂರೈಸಿ ಎಂದು ತಹಸೀಲ್ದಾರ್​ ವಿಠ್ಠಲ ಚೌಗಲಾ ಸೂಚಿಸಿದರು.

ನಗರದ ತಾಪಂ ಕಚೇರಿ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಟಾಸ್ಕ್​ಪೋರ್ಸ್​ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.

ಗ್ರಾಪಂ ಮಟ್ಟದಲ್ಲಿ ಶಿಥಿಲಾವಸ್ಥೆಯಲ್ಲಿರುವ ನೀರಿನ ಮೇಲ್ತೊಟ್ಟಿಗಳನ್ನು ತೆರವು ಮಾಡಿ. ಜನರಿಗೆ ಶುದ್ಧ ಕುಡಿವ ನೀರು ಒದಗಿಸಿ. ಮಳೆಯಿಂದ ಚರಂಡಿಯಲ್ಲಿ ನೀರು ಹೆಚ್ಚಿ ಕುಡಿವ ನೀರು ಮೂಲಗಳೊಂದಿಗೆ ಬೆರೆವ ಸಾಧ್ಯತೆ ಇದೆ. ಈ ಬಗ್ಗೆ ಎಚ್ಚರಿಕೆವಹಿಸಿ. ಕುಡಿವ ನೀರು ಪರೀೆಗೆ ಒಳಪಡಿಸಿ. ಕಲುಷಿತ ನೀರಿನಿಂದ ಜನರಿಗೆ ಸಮಸ್ಯೆ ಆದಲ್ಲಿ ಅಧಿಕಾರಿಗಳನ್ನು ಹೊಣೆ ಮಾಡಲಾಗುವುದು. ಹುಲಿಗಿ ಗ್ರಾಮದಲ್ಲಿ ಹುಲಿಗೆಮ್ಮ ದೇವಿ ಜಾತ್ರೆ ಇದೆ. ಆಗಮಿಸುವ ಭಕ್ತರಿಗೆ ಕುಡಿವ ನೀರು ಸೇರಿ ಮೂಲ ಸೌಕರ್ಯ ಕಲ್ಪಿಸಿ. ಆರೋಗ್ಯಾಧಿಕಾರಿಗಳು ತಾತ್ಕಾಲಿಕ ಚಿಕಿತ್ಸಾ ಕೇಂದ್ರ ಆರಂಭಿಸಿ ಎಂದು ಸೂಚಿಸಿದರು.

ನೀರಿನ ಮೂಲ ಕಡಿಮೆ ಇರುವ ಗ್ರಾಮಗಳಲ್ಲಿ ಖಾಸಗಿ ಬೋರ್​ವೆಲ್​ ಬಾಡಿಗೆ ಪಡೆಯಿರಿ. ನೀರಿನ ಪ್ರಮಾಣ ಕುಸಿದಲ್ಲಿ ್ಲಶ್ಸಿಂಗ್​ ಮಾಡಿಸಿ. ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಿ ಎಂದು ಕುಡಿವ ನೀರು ಮತ್ತು ನೈರ್ಮಲ್ಯ ಅಧಿಕಾರಿಗಳಿಗೆ ತಾಕೀತು ಮಾಡಿದರು. ತಾಪಂ ಇಒ ದುಂಡಪ್ಪ ತುರಾದಿ, ನಗರಸಭೆ ಆಯುಕ್ತ ಗಣಪತಿ ಪಾಟೀಲ್​, ಉಪ ತಹಸೀಲ್ದಾರ್​, ಕಂದಾಯ ನಿರೀಕ್ಷಕರು, ಪಿಡಿಒಗಳಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net