ಕೊಪ್ಪಳ: ತೋಟಗಾರಿಕೆ ಇಲಾಖೆಯಿಂದ ನಗರದ ತೋಟಗಾರಿಕೆ ಇಲಾಖೆ ಆವರಣದಲ್ಲಿ ಆ.15ರಿಂದ 20ವರೆಗೆ 6 ದಿನ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನ ಹಮ್ಮಿಕೊಳ್ಳಲಾಗಿದೆ.
ಈ ವರ್ಷ ರೈತರಿಗೆ ವಿದೇಶಿ ಹಣ್ಣಿನ ಸಸಿಗಳ ಪರಿಚಯ ಮಾಡುವುದರ ಜತೆಗೆ ವಿದೇಶಿ ಹಣ್ಣಿನ ಸಸಿಗಳನ್ನು ಸಹ ರೈತರಿಗೆ ಮಾರಾಟ ಮಾಡಲಾಗುವುದು. ರೈತರಿಗೆ ಕಾರ್ಬನ್ ಕ್ರೆಡಿಟ್ ಕುರಿತು ಕಂಪನಿಗಳೊಂದಿಗೆ ನೋಂದಣಿ ಮತ್ತು ಜಿಲ್ಲೆಯ ರೈತರಿಗೆ, ತೋಟಗಾರಿಕೆ ಬೆಳೆಗಳಲ್ಲಿ ಆಸಕ್ತಿ ಇರುವ ಸಾರ್ವಜನಿಕರಿಗೆ ಒಂದೇ ಸೂರಿನಡಿ ತೋಟಗಾರಿಕೆ ಕ್ಷೇತ್ರಗಳಲ್ಲಿ ಉತ್ಪಾದಿಸಿದ ಮಾವು, ತೆಂಗು, ಪೇರಲ, ಚಿಕ್ಕು, ಅಂಜೂರ, ಕರಿಬೇವು, ನುಗ್ಗೆ, ದ್ರಾಕ್ಷಿ ತಳಿಗಳಲ್ಲದೇ ಅನೇಕ ವಿಧದ ಕಸಿ/ಸಸಿಗಳು, ಅಲಂಕಾರಿಕ ಸಸ್ಯಗಳು, ಹೂವಿನ, ತರಕಾರಿ, ಔಷಧಿಯ, ಸಾಂಬಾರು ಸಸ್ಯಗಳು ಸಸಿ ಪೂರೈಸಲಾಗುವುದು.
ಜಿಲ್ಲೆಯ ಸಮಸ್ತ ರೈತರು ಮತ್ತು ಸಾರ್ವಜನಿಕರು ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ, ಜಿಲ್ಲಾ ತೋಟಗಾರಿಕೆ ಇಲಾಖೆ, ಸಹಾಯಕ ತೋಟಗಾರಿಕೆ ನಿರ್ದೇಶಕರು (ರಾ.ವ.) ಕೊಪ್ಪಳ ಮೊ.ಸ: 9632221224 ಹಾಗೂ ಆಯಾ ತಾಲೂಕುಗಳ ತೋಟಗಾರಿಕೆ ಇಲಾಖೆ ಕಚೇರಿಗಳನ್ನು ಸಂಪರ್ಕಿಸಬಹುದೆಂದು ಕೊಪ್ಪಳ ತೋಟಗಾರಿಕೆ ಉಪನಿರ್ದೇಶಕ ಕೃಷ್ಣ ಉಕ್ಕುಂದ ತಿಳಿಸಿದ್ದಾರೆ.