ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Published on

ಕೊಪ್ಪಳ: ಕೊಪ್ಪಳ ವಿಶ್ವವಿದ್ಯಾಲಯ ಸ್ನಾತಕೋತ್ತರ ಪದವಿ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ಅವಧಿ ಡಿ.25ವರೆಗೆ ವಿಸ್ತರಿಸಲಾಗಿದೆ.

2024-&25ನೇ ಶೈಕ್ಷಣಿಕ ಸಾಲಿನ ಕೊಪ್ಪಳ ವಿಶ್ವವಿದ್ಯಾಲಯದ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿಗೆ ಸಂಧಿಸಿದಂತೆ ಅರ್ಜಿ ಸಲ್ಲಿಕೆಗೆ ನ.30ವರೆಗೆ ಅವಕಾಶ ಕಲ್ಪಿಸಲಾಗಿತ್ತು. ಪ್ರಸ್ತುತ ವಿದಾರ್ಥಿಗಳ ಹಿತದೃಷ್ಠಿಯಿಂದ ಡಿ.25ವರೆಗೆ ವಿಸ್ತರಿಸಲಾಗಿದೆ. ಆನ್​ಲೈನ್​ನಲ್ಲಿ ಅರ್ಜಿ ಸಲ್ಲಿಸಿದ ನಂತರ ಅದರ ಒಂದು ಪ್ರತಿಯೊಂದಿಗೆ ಸಂಬಂಧಪಟ್ಟ ದಾಖಲಾತಿಗಳ ನಕಲು ಪ್ರತಿಯನ್ನು ದೃಢೀಕರಿಸಿ ವಿವಿಗೆ ಸಲ್ಲಿಸಬೇಕು.

ಮಾಹಿತಿಗೆ ವಿವಿ ಜಾಲತಾಣ ಅಥವಾ ಕೊಪ್ಪಳ ವಿಶ್ವವಿದ್ಯಾಲಯದ ಮುಖ್ಯ ಅವರಣ, 4ನೇ ಮಹಡಿ, ಸರ್ಕಾರಿ ತಾಂತ್ರಿಕ ಮಹಾವಿದ್ಯಾಲಯ, ತಳಕಲ್​, ಸ್ನಾತಕೋತ್ತರ ಕೇಂದ್ರ, ಯಲಬುರ್ಗಾ ಮತ್ತು ಗಂಗಾವತಿ ಹಾಗೂ ಸಂಯೋಜಿತ ಮಹಾವಿದ್ಯಾಲಯಗಳಿಗೆ ನೇರವಾಗಿ ಭೇಟಿ ನೀಡಿ ಮಾಹಿತಿ ಪಡೆಯಬಹುದೆಂದು ಕುಲಸಚಿವರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net