ಕೊಪ್ಪಳ: ಜಿಲ್ಲೆಯಲ್ಲಿ ಖಾಲಿ ಇರುವ 19 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳನ್ನು ನೇಮಕಾತಿ ಮಾಡುವ ಸಲುವಾಗಿ ರೋಸ್ಟರ್ ಕಮ್ ಮೆರಿಟ್ ಆಧಾರದ ಮೇಲೆ 1:3 ಅನುಪಾತದಲ್ಲಿ ಅಭ್ಯರ್ಥಿಗಳ ಅರ್ಹತಾ ಪಟ್ಟಿಯನ್ನು ಜಿಲ್ಲಾ ವೆಬ್ಸೈಟ್ koppal.nic.in ನಲ್ಲಿ ಪ್ರಕಟಿಸಲಾಗಿದೆ. ಅರ್ಹತಾ ಪಟ್ಟಿಯಲ್ಲಿರುವ ಅಭ್ಯರ್ಥಿಗಳ ಮೂಲ ದಾಖಲಾತಿ ಪರಿಶೀಲನೆಯು ಜನವರಿ 2 ಮತ್ತು 3 ರಂದು ಬೆಳಗ್ಗೆ 10 ರಿಂದ ಸಂಜೆ 5.30ರವರೆಗೆ ನಡೆಯಲಿದೆ.
ಜಿಲ್ಲಾಧಿಕಾರಿ ಕಚೇರಿಯ ಆಡಿಟೋರಿಯಂ ಹಾಲ್ನಲ್ಲಿ ನಡೆಯಲಿದ್ದು, ಅಭ್ಯರ್ಥಿಗಳು ಅರ್ಜಿಯಲ್ಲಿ ನಮೂದಿಸಿದ ಸಂಬಂಧಪಟ್ಟ ಮೂಲ ಹಾಗೂ ಒಂದು ಸೆಟ್ ದೃಢೀಕೃತ ದಾಖಲಾತಿಗಳೊಂದಿಗೆ ಪರಿಶೀಲನೆಗೆ ಖುದ್ದಾಗಿ ಹಾಜರಾಗಬೇಕು ಎಂದು ಅಪರ ಜಿಲ್ಲಾಧಿಕಾರಿ ತಿಳಿಸಿದ್ದಾರೆ.