ವಾಲ್ಮೀಕಿ ಜಯಂತಿಗೆ ಸಿದ್ಧತೆ ಮಾಡಿಕೊಳ್ಳಿ

district koppal valmiki jayanthi dc meeting suresh itnal
Published on

ಕೊಪ್ಪಳ: ಜಿಲ್ಲಾ ಕೇಂದ್ರದಲ್ಲಿ ಅ.7ರಂದು ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಗೆ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಸುರೇಶ ಬಿ.ಇಟ್ನಾಳ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಗುರುವಾರ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು.

ಅಂದು ಬೆಳಗ್ಗೆ 10.30ಕ್ಕೆ ಸಾಹಿತ್ಯ ಭವನದಲ್ಲಿ ವೇದಿಕೆ ಕಾರ್ಯಕ್ರಮ ಆಯೋಜಿಸಿ. ವಿಶೇಷ ಉಪನ್ಯಾಸ ಇರಲಿ. ಬೆಳಗ್ಗೆ 8 ಗಂಟೆಗೆ ನಗರದ ಸಿರಸಪ್ಪಯ್ಯನ ಮಠದಿಂದ ಸಾಹಿತ್ಯ ಭವನದವರೆಗೆ ಶ್ರೀ ಮಹರ್ಷಿ ವಾಲ್ಮೀಕಿ ಭಾವಚಿತ್ರ ಮೆರವಣಿಗೆ ಮಾಡಿ. ಮೆರವಣಿಗೆ ಮಾರ್ಗ ಸ್ವಚ್ಛಗೊಳಿಸಿ. ಸಾರ್ವಜನಿಕರಿಗೆ ಕುಡಿವ ನೀರು ಕಲ್ಪಿಸಿ. ಸರ್ಕಾರಿ ಕಚೇರಿಗಳು, ಶಾಲಾ&ಕಾಲೇಜಿನಲ್ಲಿ ಜಯಂತಿ ಆಚರಿಸಿ. ಸಮುದಾಯ ಮುಖಂಡರು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಬೇಕೆಂದು ಮನವಿ ಮಾಡಿದರು.

ವಿಪ ಸದಸ್ಯೆ ಹೇಮಲತಾ ನಾಯಕ ಮಾತನಾಡಿ, ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಅರ್ಥಪೂರ್ಣವಾಗಿರಲಿ. ಸಮುದಾಯದ ಪ್ರತಿಭಾನ್ವಿತ ವಿದ್ಯಾರ್ಥಿಗಳು ಮತ್ತು ಸಮುದಾಯ ಅಭಿವೃದ್ಧಿಗೆ ಶ್ರಮಿಸಿದ ಹಿರಿಯರನ್ನು ಗೌರವಿಸಿ. ಎಲ್ಲ ಅಧಿಕಾರಿ, ಸಿಬ್ಬಂದಿ ಕಡ್ಡಾಯವಾಗಿ ಹಾಜರಿರುವಂತೆ ಸೂಚಿಸಿದರು.

ಜಿಪಂ ಉಪಕಾರ್ಯದರ್ಶಿ ಟಿ.ಕೃಷ್ಣಮೂರ್ತಿ, ಡಿಯುಡಿಸಿ ಪಿಡಿ ಮಂಜುನಾಥ ಗುಂಡೂರು, ಸಮಾಜ ಕಲ್ಯಾಣ ಉಪನಿರ್ದೇಶಕ ಅಜ್ಜಪ್ಪ ಸೊಗಲದ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪಿ.ವೈ.ಶೆಟ್ಟೆಪ್ಪನವರ, ಡಿಡಿಪಿಯು ಜಗದೀಶ ಜಿ.ಎಚ್​., ಕನ್ನಡ ಮತ್ತು ಸಂಸತಿ ಇಲಾಖೆ ಸಹಾಯಕ ನಿರ್ದೇಶಕ ಕರ್ಣಕುಮಾರ್​, ಸಮುದಾಯ ಮುಖಂಡರಾದ ಶಂಕರಗೌಡ ಪಾಟೀಲ್​, ಸುರೇಶ ಡೊಣ್ಣಿ, ಕೊಟೇಶ್​ ತಳವಾರ, ವೆಂಕಟೇಶ್​ ಪೂಜಾರ, ಲಕ್ಷ$್ಮಣ ಚೌಡ್ಕಿ, ಶ್ರೀನಿವಾಸ ಗಿಣಿಗೇರಾ, ಶರಣಪ್ಪ ನಾಯಕ, ಗಿರಿಯಪ್ಪ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net