

ಕೊಪ್ಪಳ: ಜಿಲ್ಲಾಡಳಿತ, ಜಿಪಂನಿಂದ ತಾಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮ ನಾಳೆ (ನ.12) ಗಂಗಾವತಿ ತಾಲೂಕಿನ ವೆಂಕಟಗಿರಿ ಗ್ರಾಮದಲ್ಲಿ ನಡೆಯಲಿದೆ.
ಸಾರ್ವಜನಿಕರ ಕುಂದು, ಕೊರತೆ ಶ್ರೀ ಪರಿಹರಿಸುವ ನಿಟ್ಟಿನಲ್ಲಿ ಪ್ರತಿ ತಾಲೂಕಿಗೆ ಜನ ಸ್ಪಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಡಿಸಿ ನಲಿನ್ ಅತುಲ್, ಜಿಪಂ ಸಿಇಒ ರಾಹುಲ್ ರತ್ನಂ ಪಾಂಡೆಯ, ಎಸ್ಪಿ ಡಾ.ರಾಮ್ ಎಲ್.ಅರಸಿದ್ದಿ ಹಾಗೂ ಇತರ ಅಧಿಕಾರಿಗಳು ಭಾಗಿಯಾಗಲಿದ್ದಾರೆ. ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ವೆಂಕಟಗಿರಿ ಗ್ರಾಮದ ಶ್ರೀ ಲಕ್ಷಿ$್ಮ ವೆಂಕಟೇಶ್ವರ ದೇವಸ್ಥಾನ ಆವರಣದಲ್ಲಿ ಆಯೋಜಿಸಲಾಗಿದೆ. ಸಾರ್ವಜನಿಕರು ಭಾಗಿಯಾಗಿ ತಮ್ಮ ಅಹವಾಲು ಸಲ್ಲಿಸಲು ಡಿಸಿ ನಲಿನ್ ಅತುಲ್ ಮನವಿ ಮಾಡಿದ್ದಾರೆ.