

ಕೊಪ್ಪಳ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಹತ್ತಾರು ರೀತಿಯಲ್ಲಿ ಮತದಾನ ಜಾಗೃತಿ ಮೂಡಿಸಲಾಗುತ್ತಿದೆ. ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬಸ್ ಟಿಕೆಟ್ನಲ್ಲಿ ಮತದಾನ ಜಾಗೃತಿ ಮೂಡಿಸುತ್ತಿದೆ.
ಮತದಾನ ಪ್ರಮಾಣ ಹೆಚ್ಚಳಕ್ಕೆ ಸ್ವೀಪ್ ಸಮಿತಿ ಹಲವಾರು ಜಾಗೃತಿ ಕಾರ್ಯಕ್ರಮ ಆಯೋಜಿಸುತ್ತಿದೆ. ಸಮಿತಿಯೊಂದಿಗೆ ಕೈಜೋಡಿಸಿರುವ ಕೆಕೆಆರ್ಟಿಸಿ ಸಂಸ್ಥೆಯ ಬಸ್ಸುಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ನೀಡುವ ಟಿಕೆಟ್ನಲ್ಲೂ ಮತದಾನದ ಸಂದೇಶ ನೀಡುವ ಮೂಲಕ ಮತದಾರರಲ್ಲಿ ಜಾಗೃತಿ ಮೂಡಿಸುತ್ತಿದೆ.
ಮೇ 7ರಂದು ಬೆಳಗ್ಗೆ 7 ರಿಂದ ಸಂಜೆ 6 ಗಂಟೆವರೆಗೆ ಮತದಾನ ನಡೆಯಲಿದೆ. ಎಲ್ಲರೂ ತಮ್ಮ ಅಮೂಲ್ಯ ಮತ ಚಲಾಯಿಸಿ ಪ್ರಜಾಪ್ರಭುತ್ವ ವ್ಯವಸ್ಥೆಬಲಪಡಿಸಬೇಕೆಂಬುದು ಚುನಾವಣಾ ಆಯೋಗದ ಆಶಯ. ವಿವಿಧ ಇಲಾಖೆಗಳು, ಗ್ರಾಪಂ, ತಾಪಂ, ನಗರ, ಸ್ಥಳಿಯ ಸಂಸ್ಥೆಗಳು ಮತದಾನ ಜಾಗೃತಿಯಲ್ಲಿ ಭಾಗಿಯಾಗಿವೆ.