ಕ್ರೀಡೆಯಿಂದ ದೈಹಿಕ, ಮಾನಸಿಕ ಆರೋಗ್ಯ : ಅರವಿಂದ ಅಯ್ಯಪ್ಪ ಸುತಗುಂಡಿ ಪ್ರತಿಪಾದನೆ

kukke
Published on

ಸುಬ್ರಹ್ಮಣ್ಯ: ಕ್ರೀಡೆಗಳು ದೈಹಿಕ ಮತ್ತು ಮಾನಸಿಕ ಆರೋಗ್ಯ ವೃದ್ಧಿಗೆ ಪೂರಕ. ಆದರೆ ಇವುಗಳನ್ನು ಮರೆತು ವಿದ್ಯಾರ್ಥಿಗಳು ಮೊಬೈಲ್ ವ್ಯಾಮೋಹ ಬೆಳೆಸಿಕೊಂಡಿರುವುದು ಬೇಸರದ ಸಂಗತಿ ಎಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ ಹೇಳಿದರು.

ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತದ ಎಸ್‌ಎಸ್ ಪಿಯು ಕಾಲೇಜಿನಲ್ಲಿ ಮಂಗಳವಾರ, ಜಿಲ್ಲಾಮಟ್ಟದ ಬಾಲಕ-ಬಾಲಕಿಯರ ಥ್ರೋಬಾಲ್ ಪಂದ್ಯಾಟ ಉದ್ಘಾಟಿಸಿ ಮಾತನಾಡಿದರು.

ದ.ಕ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಯಣ್ಣ ಸಿ.ಡಿ ಅಧ್ಯಕ್ಷತೆ ವಹಿಸಿದ್ದರು. ಪ್ರಾಚಾರ್ಯ ಸೋಮಶೇಖರ್ ನಾಯಕ್, ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಜೇಶ್ ಎನ್.ಎಸ್, ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ವೆಂಕಟೇಶ್ ಎಚ್.ಎಲ್, ವಿದ್ಯಾಲಯಗಳ ನಿರ್ವಾಹಕ ಮತ್ತು ಕುಕ್ಕೆ ದೇವಳದ ಸಿಬ್ಬಂದಿ ಶಿವಸುಬ್ರಹ್ಮಣ್ಯ ಭಟ್, ಉಪನ್ಯಾಸಕಿ ರೇಖಾರಾಣಿ ಸೋಮಶೇಖರ್, ದೈಹಿಕ ಶಿಕ್ಷಣ ಉಪನ್ಯಾಸಕ ರಾಧಾಕೃಷ್ಣ ಚಿದ್ಗಲ್, ವಿದ್ಯಾರ್ಥಿ ಸಂಘದ ಸಂಚಾಲಕ ಜಯಪ್ರಕಾಶ್ ಆರ್, ಕ್ರೀಡಾ ಸಂಯೋಜಕಿ ಜ್ಯೋತಿ ಪಿ.ರೈ, ಕ್ರೀಡಾ ಕಾರ್ಯದರ್ಶಿ ಹಿತೇಶ್ ಎಚ್.ಎಸ್ ವೇದಿಕೆಯಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net