

ಮಂಡ್ಯ: ಮಕ್ಕಳ ಮನೋಸಾಮರ್ಥ್ಯ ಹೆಚ್ಚಿಸುವ ಚೆಸ್ ಪಂದ್ಯ ವಿಶ್ವಮಾನ್ಯಗೊಂಡಿದೆ ಎಂದು ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಎನ್.ಸಿ.ರಾಜು ಹೇಳಿದರು.
ನಗರದ ಚಾಮುಂಡೇಶ್ವರಿ ಬಡಾವಣೆಯಲ್ಲಿರುವ 22ನೇ ಸೆಂಚುರಿ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಬಾಲಕಿ-ಬಾಲಕರ ಜಿಲ್ಲಾ ಮಟ್ಟದ ಚೆಸ್ ಪಂದ್ಯಾವಳಿ ಉದ್ಘಾಟಿಸಿ ಮಾತನಾಡಿದರು. ಜಿಲ್ಲೆಯಲ್ಲಿನ ಶಿಕ್ಷಣ ಇಲಾಖೆ ವ್ಯಾಪ್ತಿಯ ದಕ್ಷಿಣ ಮತ್ತು ಉತ್ತರ ವಲಯದ ಪ್ರಾಥಮಿಕ-ಪ್ರೌಢಶಾಲಾ ವಿದ್ಯಾರ್ಥಿಗಳು ಪಂದ್ಯಾವಳಿಯಲ್ಲಿ ಪಾಲ್ಗೊಂಡಿದ್ದಾರೆ. ಇಲ್ಲಿ ಗೆದ್ದವರು ಮುಂದಿನ ಹಂತಕ್ಕೆ ಆಯ್ಕೆಯಾಗುತ್ತಾರೆ. ಉತ್ತಮವಾಗಿ ಕ್ರೀಡಾಮನೋಭಾವದಿಂದ ಸ್ಪರ್ಧೆ ಎದುರಿಸಿ ಎಂದು ಸಲಹೆ ನೀಡಿದರು.
ಮುಖ್ಯಶಿಕ್ಷಕಿ ಎಚ್.ಎಂ.ಹೇಮಲತಾ ಮಾತನಾಡಿ, ಇಂದಿನ ವಿದ್ಯಾರ್ಥಿಗಳು ಕುಬ್ಜರಾಗುತ್ತಿದ್ದಾರೆ. ಕ್ರೀಡೆಗಳಲ್ಲಿ ಪಾಲ್ಗೊಳ್ಳುವಿಕೆಯಿಂದ ದೈಹಿಕ ಮತ್ತು ಮಾನಸಿಕವಾಗಿ ಸದೃಢರನ್ನಾಗಿಸುತ್ತದೆ. ಆಗ ವಿದ್ಯಾರ್ಥಿಗಳು ಏನನ್ನಾದರೂ ಸಾಧಿಸಲು ಸಾಧ್ಯವಾಗುತ್ತದೆ ಎಂದು ಕಿವಿಮಾತೇಳಿದರು.
ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ವಿಜಯ್‌ಕುಮಾರ್, ಕುಮಾರ್, ಸಂತೋಷ್‌ಕುಮಾರ್, ಮಂಜುನಾಥ್ ಇತರರಿದ್ದರು.