ಜಿಲ್ಲಾ ಮಟ್ಟದ ಮಕ್ಕಳ ವಿಜ್ಞಾನ ವಸ್ತು ಪ್ರದರ್ಶನ

29 Dwd 4
Published on

ಧಾರವಾಡ: ನಿರಂತರವಾಗಿ ಪ್ರಶ್ನೆಗಳಿಗೆ ಪರಿಹಾರ ಕಂಡುಕೊಳ್ಳುವ ವೈಜ್ಞಾನಿಕ ಸಂಶೋಧನೆಗಳು ಸಾಮಾಜಿಕ ಸ್ವಾಸ್ಥ÷್ಯಕಾಪಾಡಲು ಪೂರಕವಾಗಿರಬೇಕು ಎಂದು ಚಿಂತಕ ಮಲ್ಲಿಕಾರ್ಜುನ ಚಿಕ್ಕಮಠ ಹೇಳಿದರು.
ನಗರದ ರಂಗಾಯಣದಲ್ಲಿ ಭಾರತ ಜ್ಞಾನವಿಜ್ಞಾನ ಸಮಿತಿ ಕರ್ನಾಟಕ, ಬೆಂಗಳೂರಿನ ರೋಹನ್ ಕೇರ್ ಫೌಂಡೇಶನ್, ಚೇತನ ಫೌಂಡೇಷನ್ ಕರ್ನಾಟಕ ಜಂಟಿ ಆಶ್ರಯದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಜಿಲ್ಲಾ ಮಟ್ಟದ ಮಕ್ಕಳ ವಿಜ್ಞಾನ ವಸ್ತು ಪ್ರದರ್ಶನ ಉದ್ಘಾಟಿಸಿ ಅವರು ಮಾತನಾಡಿದರು.
ಮಕ್ಕಳು ಪ್ರಶ್ನಿಸದೆ ಯಾವುದೇ ಸಂಗತಿಯನ್ನು ಒಪ್ಪಬಾರದು. ತಾಂತ್ರಿಕವಾಗಿ ಬೆಳೆಯುತ್ತಿರುವ ಇಂದಿನ ಯುಗವನ್ನು ಜ್ಞಾನದ ಯುಗ ವಿಜ್ಞಾನದ ಯುಗ ಎಂದು ಹೇಳಬಹುದು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕೇವಲ ಅಕ್ಷರಾಭ್ಯಾಸ ಇದ್ದರೆ ಸಾಲದು. ಮಕ್ಕಳಿಗೆ ಅನ್ವೇಷಣೆ, ಸಂಶೋಧನೆ ಹಾಗೂ ಸೃಜನಾತ್ಮಕ ಮನೋಧೋರಣೆಯನ್ನು ಬೆಳೆಸಲು ಇಂತಹ ವಿಜ್ಞಾನ ವಸ್ತು ಪ್ರದರ್ಶನ ಅನುಕೂಲಕರ ಎಂದರು.
ಕರ್ನಾಟಕ ವಿದ್ಯಾವರ್ಧಕ ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ಮಾತನಾಡಿ, ಭಾರತ ಜ್ಞಾನ ವಿಜ್ಞಾನ ಸಮಿತಿ ಶೈಕ್ಷಣಿಕ ಕಾರ್ಯಕ್ರಮಗಳಾದ ಚಿಣ್ಣರ ಮೇಳ, ಮಕ್ಕಳ ವಿಜ್ಞಾನ ಹಬ್ಬ, ಮಕ್ಕಳ ಸಾಹಿತ್ಯ ಸಂಭ್ರಮದAತಹ ಹತ್ತು ಹಲವು ಕಾರ್ಯಕ್ರಮಗಳನ್ನು ರೂಪಿಸುತ್ತಿದೆ. ಶಿಕ್ಷಣ ಇಲಾಖೆಯ ಜೊತೆಗೆ ಕೈಜೋಡಿಸಿ ಸಾಕಷ್ಟು ಶೈಕ್ಷಣಿಕ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಮಾಡಿದೆ ಎಂದರು.
ಭಾರತ ಜ್ಞಾನ ವಿಜ್ಞಾನ ಸಮಿತಿಯ ಧಾರವಾಡ ಜಿಲ್ಲಾ ಘಟಕದ ಅಧ್ಯಕ್ಷ ಗುರು ತಿಗಡಿ ಅಧ್ಯಕ್ಷತೆ ವಹಿಸಿದ್ದರು. ಪರಿಸರವಾದಿ ವೀರಪ್ಪ ಅರಕೇರಿ ಉಪನ್ಯಾಸ ನೀಡಿದರು. ಭಾರತ ಜ್ಞಾನ ವಿಜ್ಞಾನ ಸಮಿತಿಯ ರಾಜ್ಯ ಉಪಾಧ್ಯಕ್ಷ ಎಫ್.ಸಿ. ಚೇಗರಡ್ಡಿ ಬಹುಮಾನ ವಿತರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net