ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟನೆ

udp-31-dasara sports
Published on

ಉಡುಪಿ: ಬೆಂಗಳೂರು ನಗರದ ಬಳಿಕ ಅತ್ಯಂತ ಸುಸಜ್ಜಿತ ಕ್ರೀಡಾಂಗಣವನ್ನು ಹೊಂದಿರುವ ಜಿಲ್ಲೆ ಉಡುಪಿ. ಜಿಲ್ಲೆಯು ಶೈಕ್ಷಣಿಕವಾಗಿ ಮುಂದಿದ್ದು, ಕ್ರೀಡಾಕೂಟಗಳಲ್ಲಿಯೂ ಕೂಡಾ ಹೆಸರು ಪಡೆಯುವಂತಾಗಬೇಕು. ವಿದ್ಯಾರ್ಥಿಗಳು ಕ್ರೀಡಾಂಗಣದಲ್ಲಿರುವ ಅತ್ಯಾಧುನಿಕ ಸೌಲಭ್ಯಗಳ ಸದುಪಯೋಗ ಪಡೆದುಕೊಂಡು ಸಾಧನೆ ಮಾಡಿ ಜಿಲ್ಲೆಗೆ ಕೀರ್ತಿ ತರಬೇಕು ಎಂದು ಶಾಸಕ ಯಶ್​ಪಾಲ್​ ಸುವರ್ಣ ಹೇಳಿದರು.

ಅಜ್ಜರಕಾಡು ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಅಂಗವಾಗಿ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ನಗರಸಭಾಧ್ಯಕ್ಷ ಪ್ರಭಾಕರ ಪೂಜಾರಿ ಮಾತನಾಡಿ, ತಾಲೂಕುಮಟ್ಟದ ಕ್ರೀಡಾಕೂಟಗಳಲ್ಲಿ ವಿಜೇತರಾದವರು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದು ಮುಂದೆ ರಾಜ್ಯಮಟ್ಟಕ್ಕೆ ಆಯ್ಕೆಯಾಗಬೇಕು. ಜಿಲ್ಲೆಯ ಕ್ರೀಡಾಳುಗಳು ಉತ್ತಮಸಾಧನೆ ಮಾಡಿ ಯಶಸ್ವಿಯಾಗುವಂತೆ ಶುಭಹಾರೈಸಿದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರೋಶನ್​ ಶೆಟ್ಟಿ, ಕಾಪು ತಾಲೂಕು ಯುವಜನ ಸೇವಾ ಕ್ರೀಡಾಧಿಕಾರಿ ರಿತೇಶ್​ ಶೆಟ್ಟಿ, ಕುಂದಾಪುರ ತಾಲೂಕು ಯುವಜನ ಸೇವಾ ಕ್ರೀಡಾಧಿಕಾರಿ ಕುಸುಮಾಕರ ಶೆಟ್ಟಿ, ಉಡುಪಿ ತಾಲೂಕು ಯುವಜನ ಸೇವಾ ಕ್ರೀಡಾಧಿಕಾರಿ ವಸಂತ ಜೋಗಿ, ಡಾ.ಜಿ.ಶಂಕರ್​ ಮಹಿಳಾ ಕಾಲೇಜಿನ ದೈಹಿಕ ಶಿಕ್ಷಕ ಡಾ.ರಾಮಚಂದ್ರ ಪಾಟ್ಕರ್​ ಮತ್ತಿತರರು ಉಪಸ್ಥಿತರಿದ್ದರು. ಬಲೂನ್​ ಹಾರಿಸುವ ಮೂಲಕ ಸಾಂಕೇತಿಕವಾಗಿ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net