

ಕುಶಾಲನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಕೂಡಿಗೆಯ ಸರ್ಕಾರಿ ಕ್ರೀಡಾ ಪ್ರೌಢಶಾಲಾ ಕ್ರೀಡಾಂಗಣದಲ್ಲಿ ನಡೆಯಿತು.
ಕ್ರೀಡಾಕೂಟದ ಉದ್ಘಾಟನೆಯನ್ನು ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ವಿಸ್ಮಯಿ ಚಕ್ರವರ್ತಿ ಅವರು ನೆರವೇರಿಸಿ ಮಾತಾನಾಡಿ, ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸುವ ಮೂಲಕ ತಮ್ಮ ಕ್ರೀಡಾ ಪ್ರತಿಭೆಯನ್ನು ಪ್ರದರ್ಶಿಸಿಲು ಉತ್ತಮ ಅವಕಾಶವಾಗಿದೆ. ಜೊತೆಯಲ್ಲಿ ರಾಜರ ಆಳ್ವಿಕೆಯ ಕಾಲದಿಂದಲೂ ಕ್ರೀಡೆಗೆ ಹೆಚ್ಚು ಒತ್ತು ನೀಡುತ್ತಾ ಬಂದಿರುವ ಹಿನ್ನೆಲೆಯಲ್ಲಿ ರಾಜ್ಯ ಮತ್ತು ರಾಷ್ಟ್ರದ ಮಟ್ಟದಲ್ಲಿ ಭಾಗವಹಿಸುವ ಮೂಲಕ ತಮ್ಮ ಪ್ರತಿಭೆಯನ್ನು ಗುರುತಿಸಿ ತಮ್ಮ ಬದುಕನ್ನು ಕಟ್ಟಿಕೊಳ್ಳಲು ಇಂತಹ ಕ್ರೀಡಾಕೂಟಗಳು ಪೂರಕವಾಗುತ್ತವೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಮುಖ್ಯೋಪಾಧ್ಯಾಯ ಮುರುಳಿ ಮಾತನಾಡಿ, ಜಿಲ್ಲಾ ಮಟ್ಟದಿಂದ ವಿಭಾಗ ಮಟ್ಟದಲ್ಲಿ ಭಾಗವಹಿಸಿ ಪ್ರಥಮ ಸ್ಥಾನಗಳಿಸುವ ಮೂಲಕ ಜಿಲ್ಲೆಗೆ ಕೀರ್ತಿ ತರುವಂತಾಗಲ್ಲಿ ಎಂದು ಹಾರೈಸಿದರು.
ಈ ಸಂದರ್ಭದಲ್ಲಿ ಕ್ರೀಡಾ ತರಬೇತಿದಾರರಾದ ವೆಂಕಟೇಶ, ಸುರೇಶ್, ದೀನಾಮಣಿ, ಅಂತೋಣಿ ಡಿಸೋಜ, ಬಿಂದು, ಮಹಾಬಲ, ಸುಬ್ಬಯ್ಯ, ಜನಾರ್ದನ್, ಗಣಪತಿ ಸೇರಿದಂತೆ ತಾಲೂಕು ಮಟ್ಟದಿಂದ ಜಿಲ್ಲಾಮಟ್ಟದ ವಿವಿಧ ಕ್ರೀಡೆಯಲ್ಲಿ ಆಯ್ಕೆಗೊಂಡ ನೂರಾರು ಕ್ರೀಡಾ ಪಟುಗಳು ಭಾಗವಹಿಸಿದರು.