ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟ: ಆ.30ರಂದು ನಗರದಲ್ಲಿ ಆಯೋಜನೆ

Athletics Mandya
Published on

ಮಂಡ್ಯ: ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟವನ್ನು ಆ.30ರಂದು ನಗರದ ಸರ್.ಎಂ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.

ಜಿಲ್ಲಾಮಟ್ಟದಲ್ಲಿ ಅಥ್ಲೆಟಿಕ್ಸ್, ವಾಲಿಬಾಲ್, ಖೋ ಖೋ, ಕಬಡ್ಡಿ, ಫುಟ್ಬಾಲ್, ಥ್ರೋಬಾಲ್, ಯೋಗಾಸನ, ಬ್ಯಾಸ್ಕೆಟ್‌ಬಾಲ್, ಹ್ಯಾಂಡ್‌ಬಾಲ್, ಬ್ಯಾಡ್ಮಿಂಟನ್, ಬಾಲ್ ಬ್ಯಾಡ್ಮಿಂಟನ್, ಟೇಬಲ್ ಟೆನ್ನಿಸ್, ಹಾಕಿ ಹಾಗೂ ಕುಸ್ತಿ ಕ್ರೀಡೆ ಆಯೋಜಿಸಲಾಗಿದೆ. ಟೆನ್ನಿಸ್, ನೆಟ್‌ಬಾಲ್ ಮತ್ತು ಈಜು ಕ್ರೀಡೆ ಜಿಲ್ಲಾ ಮಟ್ಟದಲ್ಲಿ ಆಯ್ಕೆ ಮಾಡಲಾಗುವುದು. ಕ್ರೀಡಾಪಟುಗಳು ವೆಬ್‌ಸೈಟ್ https://dasaracmcup&2025.etrindia.com/KA&sports ನಲ್ಲಿ ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು. ಜಿಲ್ಲೆಯ ಕ್ರೀಡಾಪಟುಗಳಿಗೆ ಮಾತ್ರ ಅವಕಾಶವಿದ್ದು, ಪಾಸ್‌ಪೋರ್ಟ್ ಅಳತೆಯ ಒಂದು ಭಾವಚಿತ್ರ, ಆಧಾರ್ ಕಾರ್ಡ್, ಬ್ಯಾಂಕ್ ಖಾತೆ ಪುಸ್ತಕದ ನಕಲು ಪ್ರತಿ ಸಲ್ಲಿಸಬೇಕು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net