

ಹಿರಿಸಾವೆ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ಕಸಾಪ ವತಿಯಿಂದ ಮಾ.10 ರಂದು ಜಿಲ್ಲಾ ಮಟ್ಟದ ಪ್ರಬಂಧ ಸ್ವರ್ಧೆ ನಡೆಯಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಹೋಬಳಿ ಅಧ್ಯಕ್ಷ ಪ್ರಮೋದ್ ಹೇಳಿದರು.
ಇಲ್ಲಿನ ಕನ್ನಡ ಸಾಹಿತ್ಯ ಪರಿಷತ್ ಹೋಬಳಿ ಘಟಕದಿಂದ ಸೋಮವಾರ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಪಾಲ್ಗೊಳ್ಳಬೇಕು ಎಂದರು.
ಅಂದು ಬೆಳಗ್ಗೆ 9.30ಕ್ಕೆ ಪ್ರಬಂಧ ಸ್ವರ್ಧೆ ಪ್ರಾರಂಭಗೊಳ್ಳಲಿದೆ. ಜಿಲ್ಲೆಯ ಸುಮಾರು 56 ಕಾಲೇಜುಗಳಿಂದ ತಲಾ ಇಬ್ಬರು ವಿದ್ಯಾರ್ಥಿಗಳು ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಪ್ರಥಮ, ದ್ವಿತೀಯ, ತೃತೀಯ ಹಾಗೂ 1 ಸಮಾಧಾನಕರ ಬಹುಮಾನ ಹಾಗೂ ಪ್ರಶಸ್ತಿ ನೀಡಲು ನಿರ್ಧರಿಸಲಾಗಿದೆ ಎಂದರು.
ಶಾಸಕ ಸಿ.ಎನ್.ಬಾಲಕೃಷ್ಣ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಾ.ಎಚ್.ಎಲ್.ಮಲ್ಲೇಶ್‌ಗೌಡ, ತಾಲೂಕು ಅಧ್ಯಕ್ಷ ಎಚ್.ಎನ್.ಲೋಕೇಶ್, ಕಾಲೇಜು ಪ್ರಾಂಶುಪಾಲ ಬಿ.ಎಚ್.ಲಕ್ಷ್ಮಣಗೌಡ, ಕನ್ನಡ ಸಹಾಯಕ ಪ್ರಾಧ್ಯಾಪಕಿ ಎನ್.ಆರ್.ಆಶಾ ಹಾಗೂ ಪ್ರಮುಖ ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು.
ನಿಕಟಪೂರ್ವ ಅಧ್ಯಕ್ಷ ಎಚ್.ಪಿ.ಶಂಕರ್, ಕಾರ್ಯದರ್ಶಿ ಮಾರುತಿ ಮಂಜು, ಖಜಾಂಚಿ ತೋಟಿ ಮಂಜು, ಗ್ರಾಮ ಪಂಚಾಯಿತಿ ಅಧ್ಯಕ್ಷ ಎಚ್.ಈ.ಬೋರಣ್ಣ, ಸದಸ್ಯರಾದ ಬಾಬು, ಜೀವಿ, ಹರೀಶ್, ಕಲಾಮೂರ್ತಿ, ದಾಸರಹಳ್ಳಿ ಕುಮಾರ್, ಪುರುಷೋತ್ತಮ್ ತಮ್ಮಣ್ಣ ಗೌಡ್ರು ಹಾಗೂ ಇತರರು ಇದ್ದರು.