

ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ ವಿಭಾಗ) ಹಾಗೂ ನಿಟ್ಟೆ ಪದವಿ ಪೂರ್ವ ಕಾಲೇಜು ಕಾರ್ಕಳ ಆಶ್ರಯದಲ್ಲಿ ನಡೆದ ಜಿಲ್ಲಾಮಟ್ಟದ ಫುಟ್‌ಬಾಲ್ ಪಂದ್ಯಾಟದಲ್ಲಿ ಭಾಗವಹಿಸಿದ ಕುಂದಾಪುರದ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಶ್ರೇಯಾ ಶೆಟ್ಟಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಬೋಧಕ ಹಾಗೂ ಬೋಧಕೇತರರು ಅಭಿನಂದನೆ ಸಲ್ಲಿಸಿದ್ದಾರೆ.