ಜಿಲ್ಲಾ ಮಟ್ಟದ ಫಲ-ಪುಷ್ಪ ಪ್ರದರ್ಶನ

WEB LOGO
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ, ಹು-ಧಾ ಮಹಾನಗರ ಪಾಲಿಕೆ, ಫಲ-ಪುಷ್ಪ ಪ್ರದರ್ಶನ ಸಮಿತಿ, ಜಿಲ್ಲಾ ಹಾಪ್​ ಕಾಮ್ಸ್​, ಹುಬ್ಬಳ್ಳಿಯ ಸ್ವರ್ಣ ಟೆಕ್ನೋ ಕನ್​ಸ್ಟ್ರಕ್ಷನ್​ ಹಾಗೂ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್​ ಸಹಯೋಗದಲ್ಲಿ 2024-25ನೇ ಸಾಲಿನ ಜಿಲ್ಲಾ ಮಟ್ಟದ ಫಲ-ಪುಷ್ಪ ಪ್ರದರ್ಶನವನ್ನು ನ. 16ರಿಂದ 18ರವರೆಗೆ ಹುಬ್ಬಳ್ಳಿ ಇಂದಿರಾ ಗಾಜಿನ ಮನೆ ಆವರಣದಲ್ಲಿ ಆಯೋಜಿಸಲಾಗಿದೆ.

ಫಲ -ಪುಷ್ಪ ಪ್ರದರ್ಶನದಲ್ಲಿ ಸರ್ಕಾರಿ, ಅರೆ ಸರ್ಕಾರಿ, ಖಾಸಗಿ ಸಂಘ ಸಂಸ್ಥೆಗಳು, ರೈತರು ಮತ್ತು ಸಾರ್ವಜನಿಕರು ತೋಟಗಾರಿಕೆ ಬೆಳೆಗಳು, ಹೂವುಗಳು ಮತ್ತು ಅಲಂಕಾರಿಕ ಗಿಡಗಳ ಪ್ರದರ್ಶನ ಸ್ಪರ್ಧೆಯಲ್ಲಿ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗೆ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರ ಕಚೇರಿ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net