

ಉಡುಪಿ: ಸರ್ಕಾರದ ಐದು ಗ್ಯಾರಂಟಿ ಯೋಜನೆಗೆ ಅರ್ಜಿ ಸಲ್ಲಿಸಿದ ಕೆಲವರಿಗೆ ಸಣ್ಣಪುಟ್ಟ ಸಮಸ್ಯೆಗಳಿಂದ ನೋಂದಣಿಯಾಗಿಲ್ಲ. ಅಧಿಕಾರಿಗಳು ಇಂತಹ ಅರ್ಜಿಗಳನ್ನು ಆದ್ಯತೆಯ ಮೇಲೆ ನಿಯಮಾನುಸಾರ ಪರಿಗಣಿಸಬೇಕು. ಎಲ್ಲರೂ ಯೋಜನೆ ಲಾಭ ಪಡೆಯುವಂತೆ ಮಾಡಬೇಕು ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ್ ಕೊಡವೂರು ತಿಳಿಸಿದರು.
ಮಣಿಪಾಲ ಜಿಪಂನಲ್ಲಿ ನಡೆದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶಕ್ತಿ ಯೋಜನೆಯಡಿ 2023ರ ಜೂನ್ನಿಂದ ಈವರೆಗೆ ಜಿಲ್ಲೆಯಲ್ಲಿ 2.57 ಕೋಟಿಗೂ ಹೆಚ್ಚು ಟಿಕೇಟ್ಗಳಿಗೆ 90.10 ಕೋಟಿ ರೂ. ಭರಿಸಲಾಗಿದೆ. ಗೃಹಲಕ್ಷಿ$್ಮ ಯೋಜನೆಯಡಿ 2023ರ ಆಗಸ್ಟ್ ನಿಂದ ಈವರೆಗೆ 2.25 ಲಕ್ಷಕ್ಕೂ ಹೆಚ್ಚು ಮಹಿಳೆಯರಿಗೆ 870.83 ಕೋಟಿ ರೂ. ನೀಡಲಾಗಿದೆ. ಗೃಹಜ್ಯೋತಿ ಯೋಜನೆಯಡಿ 2023ರ ಆಗಸ್ಟ್ ನಿಂದ ಈವರೆಗೆ 2.81 ಲಕ್ಷ ಗ್ರಾಹಕರಿಗೆ 438.14 ಕೋಟಿ ರೂ. ಉಚಿತ ವಿದ್ಯುತ್ ನೀಡಲಾಗಿದೆ. ಅನ್ನಭಾಗ್ಯ ಯೋಜನೆಯಡಿ ಡಿಬಿಟಿ ಮೂಲಕ 1,98,825 ಫಲಾನುಭವಿಗಳಿಗೆ 225.65 ಲಕ್ಷ ರೂ. ವರ್ಗಾಯಿಸಲಾಗಿದೆ. ಯುವನಿಧಿ ಯೋಜನೆಯಡಿ ಜಿಲ್ಲೆಯಲ್ಲಿ 3762 ಅಭ್ಯರ್ಥಿಗಳು ನೋಂದಣಿಯಾಗಿದ್ದು, ಡಿಬಿಟಿ ಮೂಲಕ ಪ್ರತಿ ತಿಂಗಳು 5.82 ಕೋಟಿ ರೂ. ಫಲಾನುಭವಿಗಳಿಗೆ ವರ್ಗಾವಣೆ ಮಾಡಲಾಗಿದೆ ಎಂದರು.
ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತಿಕ್ ಬಾಯಲ್ ಮಾತನಾಡಿ, ಜಿಲ್ಲೆಯಲ್ಲಿ ಈಗಾಗಲೇ ಐದು ಗ್ಯಾರಂಟಿ ಯೋಜನೆಗಳಿಗೆ ಶೇ. 95ಕ್ಕಿಂತಲೂ ಹೆಚ್ಚು ಜನರು ಫಲಾನುಭವಿಗಳಾಗಿದ್ದಾರೆ. ಬಾಕಿ ಉಳಿದ ಅರ್ಹ ಪ್ರತಿಯೊಬ್ಬ ಫಲಾನುಭವಿಗಳಿಗೂ ಈ ಯೋಜನೆಯ ಲಾಭ ತಲುಪಬೇಕು ಎಂದರು.
ಉಡುಪಿ ತಾಲೂಕು ಅನುಷ್ಠಾನ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್ ಮಾತನಾಡಿ, ಜಿಲ್ಲೆಯಲ್ಲಿ ಈ ಹಿಂದೆ ಕೆಲವು ಗ್ರಾಮೀಣ ಭಾಗಗಳಿಗೆ ಕೆ.ಎಸ್.ಆರ್.ಟಿ.ಸಿ ಬಸ್ಗಳು ಸಂಚರಿಸುತ್ತಿದ್ದವು. ಆದರೆ ಕೋವಿಡ್ ನಂತರದಲ್ಲಿ ಸಾರಿಗೆ ಬಸ್ಗಳ ಕಾರ್ಯಾಚರಣೆ ನಿಂತಿದೆ ಎಂದು ತಿಳಿಸಿದರು.
ಬ್ರಹ್ಮಾವರ ತಾಲೂಕು ಅನುಷ್ಠಾನ ಸಮಿತಿ ಅಧ್ಯಕ್ಷೆ ಡಾ. ಸುನೀತಾ ಶೆಟ್ಟಿ ಮಾತನಾಡಿ, ಗೃಹಲಕ್ಷಿ$್ಮ ಯೋಜನೆ ಲಾನುಭವಿ ಯಜಮಾನಿ ಮರಣ ಹೊಂದಿದಾಗ ನಂತರದ ಸ್ಥಾನದಲ್ಲಿರುವ ಮಹಿಳೆಯನ್ನು ಯಜಮಾನಿಯನ್ನಾಗಿಸಲು ಬಿ.ಪಿ.ಎಲ್. ಕಾರ್ಡ್ಗಳ ತಿದ್ದುಪಡಿಗೆ ಕೊಟ್ಟಿದ್ದರೂ ಅವುಗಳ ತಿದ್ದುಪಡಿಯಾಗದೇ ಯೋಜನೆಯ ಲಾಭ ಪಡೆಯಲು ಸಾಧ್ಯವಾಗುತ್ತಿಲ್ಲ ಎಂದರು.
ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಉಪಾಧ್ಯಕ್ಷೆ ವೀಣಾ ವಾಗ್ಳೆ, ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಮೋಹನ್ ಪೂಜಾರಿ ಉಪ್ಪುಂದ, ಶಂಕರ್ ಶೇರಿಗಾರ್, ಹರಿಪ್ರಸಾದ್ ಶೆಟ್ಟಿ ಹಾಗೂ ನವೀನ್ಚಂದ್ರ ಎಸ್ ಸುವರ್ಣ, ಸಮಿತಿಯ ಸದಸ್ಯರಾದ ಮಂಜುನಾಥ್ ಕುಲಾಲ್, ಸಯ್ಯದ್ ಕುರ್ಖಾನ್ ಯಾಸೀನ್, ರೋಷನ್ ಶೆಟ್ಟಿ, ಚಂದ್ರಶೇಖರ್ ಬಾಯರಿ, ಅಜಿತ್ ಹೆಗಡೆ ಉಪಸ್ಥಿತರಿದ್ದರು.