ಜಿಲ್ಲೆಯಲ್ಲಿ ಯುವನಿಧಿ ಯೋಜನೆಗೆ ನೋಂದಣಿ: ಜಿಪಂ ಸಿಇಒ ಶೇಖ್ ತನ್ವೀರ್ ಆಸಿಫ್ ಮಾಹಿತಿ

District level guarantee scheme progress review meeting Mandya
Published on

ಮಂಡ್ಯ: ಇಂಜಿನಿಯರಿಂಗ್ ಹಾಗೂ ಪ್ರಥಮ ದರ್ಜೆ ಕಾಲೇಜಿಗೆ ಯುವನಿಧಿ ಯೋಜನೆಯ ಬಗ್ಗೆ ಮಾಹಿತಿ ನೀಡಲಾಗುತ್ತಿದೆ. ಅದೇ ರೀತಿ ಈ ವರ್ಷ ಉತ್ತೀರ್ಣರಾದ ಸುಮಾರು 400 ಜನರನ್ನು ನೋಂದಣಿ ಮಾಡಿಸಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಶೇಖ್ ತನ್ವೀರ್ ಆಸಿಫ್ ಹೇಳಿದರು.

ನಗರದ ಜಿಪಂ ಕಚೇರಿಯ ಮಿನಿ ಸಭಾಂಗಣದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ತಾಲೈಕು ಮಟ್ಟದಲ್ಲಿ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಸಮಿತಿಯನ್ನು ರಚಿಸಿ ಸಭೆ ನಡೆಸಲಾಗಿದೆ ಎಂದರು.

ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಚಿಕ್ಕಲಿಂಗಯ್ಯ ಮಾತನಾಡಿ, ಗೃಹಲಕ್ಷ್ಮೀ, ಗೃಹಜ್ಯೋತಿ, ಅನ್ನಭಾಗ್ಯ, ಶಕ್ತಿ ಹಾಗೂ ಯುವನಿಧಿ ಯೋಜನೆ ಪ್ರಗತಿಗೆ ಅಧಿಕಾರಿಗಳು ಗಮನಹರಿಸಬೇಕು. ಐ.ಟಿ ಹಾಗೂ ಜಿ.ಎಸ್.ಟಿ ಪಾವತಿಗೆ ಸಂಬಂಧಿಸಿದಂತೆ ಗೃಹಲಕ್ಷ್ಮೀ ಯೋಜನೆಯಡಿ ಕೆಲ ಫಲಾನುಭವಿಗಳಿಗೆ ಹಣ ಪಾವತಿಯಲ್ಲಿ ತೊಂದರೆಯಾಗಿದ್ದರೆ ರಾಜ್ಯ ಮಟ್ಟಕ್ಕೆ ವಿವರ ಕಳುಹಿಸಿಕೊಡುವ ವ್ಯವಸ್ಥೆಯಾಗಬೇಕು ಎಂದು ಸೂಚನೆ ನೀಡಿದರು.

ಸಭೆಯಲ್ಲಿ ಪ್ರಾಧಿಕಾರದ ಉಪಾಧ್ಯಕ್ಷರಾದ ಎಸ್.ಎಚ್.ರಾಜೇಂದ್ರ, ಪ್ರಶಾಂತ್‌ಬಾಬು, ಜಿಪಂ ಮುಖ್ಯ ಯೋಜನಾಧಿಕಾರಿ ಎಸ್.ಧನುಷ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net