ನರಗುಂದದ ಮೂವರು ಶಿಕ್ಷಕರಿಗೆ ಜಿಲ್ಲಾ ಮಟ್ಟದ ಗೌರವ

NRD -TEACHERSSSSSSSSSSSSSSSSSS
Published on

ನರಗುಂದ: ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ತಾಲೂಕಿನ ಮೂವರು ಶಿಕ್ಷಕರು ಆಯ್ಕೆಗೊಂಡಿದ್ದಾರೆ.

ಹಿರಿಯ ಪ್ರಾಥಮಿಕ ವಿಭಾಗದಲ್ಲಿ ತಾಲೂಕಿನ ಅರಿಷಿಣಗೋಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಎಚ್.ಕೆ. ಈರಗಾರ, ಕಿರಿಯ ಪ್ರಾಥಮಿಕ ವಿಭಾಗದಲ್ಲಿ ಸಂಕಧಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಪ್ರಭಾರಿ ಮುಖ್ಯಶಿಕ್ಷಕಿ ಎಸ್.ಎಂ. ಹಿರೇಮಠ,ಪ್ರೌಢಶಾಲಾ ವಿಭಾಗದಲ್ಲಿ ತಾಲೂಕಿನ ಜಗಾಪುರದ ಸರ್ಕಾರಿ ಪ್ರೌಢಶಾಲೆಯ ಚಿತ್ರಕಲಾ ಶಿಕ್ಷಕ ಕಾಳಪ್ಪ ಬಡಿಗೇರ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಎಚ್.ಕೆ. ಈರಗಾರ 25 ವರ್ಷಗಳಿಂದ ಗ್ರಾಮೀಣ ವಿದ್ಯಾರ್ಥಿಗಳಿಗೆ ನಿರಂತರ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಎಸ್.ಎಂ. ಹಿರೇಮಠ ಅವರೂ 25 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ಚಿತ್ರಕಲಾ ಶಿಕ್ಷಕ ಕಾಳಪ್ಪ ಬಡಿಗೇರ ಅವರ ಕಲಾಕುಸರಿ ಎಂಥವರನ್ನು ನಿಬ್ಬೆರಗಾಗಿಸುತ್ತದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net