

ವಿಜಯವಾಣಿ ಸುದ್ದಿಜಾಲ ಧಾರವಾಡ
ಸರ್ಕಾರದಿಂದ ಪ್ರಥಮ ಬಾರಿಗೆ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಆಯೋಜಿಸಲಾಗುತ್ತಿದೆ. ಅಽಕಾರಿಗಳು ಉದ್ಯೋಗದಾತರು ಮತ್ತು ಉದ್ಯೋಗ ಆಕಾಂಕ್ಷಿಗಳಿಗೆ ಅನುಕೂಲವಾಗುವಂತೆ ವ್ಯವಸ್ಥಿತವಾಗಿ ಉದ್ಯೋಗ ಮೇಳ ಸಂಘಟಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಆಯೋಜನೆ ಕುರಿತು ಪೂರ್ವಸಿದ್ಧತಾ ಸಭೆಯಲ್ಲಿ ಅವರು ಮಾತನಾಡಿದರು.
ಒಂದು ವಾರ ಮೊದಲು ಉದ್ಯೋಗಾಂಕ್ಷಿಗಳ ಮಾಹಿತಿ, ಬೇಡಿಕೆ ಸಂಗ್ರಹಿಸಬೇಕು. ಅವಳಿನಗರದ ಕೈಗಾರಿಕೋದ್ಯಮಿಗಳಿಂದ ಕಾರ್ಮಿಕರ ಬೇಡಿಕೆ ಪಡೆಯಬೇಕು. ಪ್ರತಿಯೊಬ್ಬರಿಗೂ ಕುಡಿಯುವ ನೀರು, ಊಟ, ಶೌಚಗೃಹ ಸೇರಿ ಅಗತ್ಯ ಮೂಲ ಸೌಕರ್ಯಗಳನ್ನು ಕಲ್ಪಿಸಬೇಕು. ಉದ್ಯೋಗ ಆಕಾಂಕ್ಷಿಗಳ ನೋಂದಣಿ ಹೆಚ್ಚಾದರೆ 2 ದಿನಗಳವರೆಗೆ ಮೇಳ ಆಯೋಜಿಸಬೇಕು ಎಂದರು.
ಜಿಲ್ಲಾಽಕಾರಿ ದಿವ್ಯ ಪ್ರಭು ಮಾತನಾಡಿ, ಮೇಳದ ಅಗತ್ಯ ಮಾಹಿತಿಯನ್ನು ಉದ್ಯೋಗ ಮೇಳ ವೆಬ್ಸೈಟ್ ಹಾಗೂ ಕೌಶಲ್ಯ ಕರ್ನಾಟಕ ವೆಬ್ಸೈಟ್ನಲ್ಲಿ ದಾಖಲಿಸಬೇಕು. ಇದರಿಂದ ಬೇರೆ ಊರುಗಳಲ್ಲಿರುವ ಉದ್ಯೋಗ ಆಕಾಂಕ್ಷಿಗಳಿಗೆ ಅನುಕೂಲವಾಗುತ್ತದೆ ಎಂದರು.
ಜಿಲ್ಲಾ ಪಂಚಾಯಿತಿ ಸಿಇಒ ಭುವನೇಶ ಪಾಟೀಲ, ಮಹಾನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ, ಜಿಲ್ಲಾ ಪೊಲೀಸ್ ಅಽÃಕ್ಷಕ ಡಾ. ಗೋಪಾಲ ಬ್ಯಾಕೋಡ ವೇದಿಕೆಯಲ್ಲಿದ್ದರು. ಯೋಜನಾ ನಿರ್ದೇಶಕಿ ರೇಖಾ ಡೊಳ್ಳಿನವರ ಸ್ವಾಗತಿಸಿದರು. ಕೌಶಲ್ಯಾಭಿವೃದ್ಧಿ ಅಽಕಾರಿ ರವೀಂದ್ರ ದ್ಯಾಬೇರಿ ವಂದಿಸಿದರು. ವಿವಿಧ ಇಲಾಖೆಗಳ ಅಽಕಾರಿಗಳು, ಇಂಜಿನಿಯರಿAಗ್ ಕಾಲೇಜು, ಚೆಂಬರ ಆಫ್ ಕಾಮರ್ಸ್, ತಾರಿಹಾಳ ಮತ್ತು ಬೇಲೂರು ಕೈಗಾರಿಕಾ ಪ್ರದೇಶದ ಸಂಘಗಳ ಪದಾಽಕಾರಿಗಳು, ಕೈಗಾರಿಕೋದ್ಯಮಿಗಳು ಉಪಸ್ಥಿತರಿದ್ದರು.