

ಸುಬ್ರಹ್ಮಣ್ಯ: ಕ್ರೀಡಾಳುಗಳಿಗೆ ಜಾಗತಿಕಮಟ್ಟದಲ್ಲಿ ಮಾನ್ಯತೆ ಇದೆ. ಕ್ರೀಡಾ ಸಾಧನೆ ಬದುಕಿನ ಔನ್ನತ್ಯಕ್ಕೆ ದಾರಿದೀಪ ಎಂದು ಅಭಯ ಚಾರಿಟೆಬಲ್ ಟ್ರಸ್ಟ್ ಅಧ್ಯಕ್ಷ ಅಶೋಕ್ ನೆಕ್ರಾಜೆ ಹೇಳಿದರು.
ದ.ಕ ಜಿಪಂ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ, ಪಿ.ಎಂ.ಶ್ರೀ ಶಾಲೆ ಗುತ್ತಿಗಾರು, ಸರ್ಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು ಪ್ರೌಢಶಾಲಾ ವಿಭಾಗ ಆಶಯದಲ್ಲಿ ಪ್ರೌಢಶಾಲಾ ಬಾಲಕ-ಬಾಲಕಿಯರ ಜಿಲ್ಲಾಮಟ್ಟದ ಕಬಡ್ಡಿ ಪಂದ್ಯಾಟ ಉದ್ಘಾಟಿಸಿ ಮಾತನಾಡಿದರು.
ಪ್ರೌಢಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಕೇಶವ ಗೌಡ ಕಾಂತಿಲ ಅಧ್ಯಕ್ಷತೆ ವಹಿಸಿದ್ದರು. ಪ್ರಾಥಮಿಕ ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ವೆಂಕಟ್ ದಂಬೆಕೋಡಿ, ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ದಯಾನಂದ ಮುತ್ಲಾಜೆ, ಕಬಡ್ಡಿ ಅಸೋಸಿಯೇಷನ್‌ನ ಮಾಧವ ಬಿ.ಕೆ, ಕ್ಷೇತ್ರ ಶಿಕ್ಷಣಾಧಿಕಾರಿ ಶೀತಲ್, ದೈಹಿಕ ಶಿಕ್ಷಣ ಪರಿವೀಕ್ಷಕಿ ಆಶಾ ನಾಯಕ್, ಶಿಕ್ಷಣ ವಲಯ ಸಮೂಹ ಸಂಪನ್ಮೂಲ ಅಧಿಕಾರಿ ಕುಶಾಲಪ್ಪ ತುಂಬತ್ತಾಜೆ, ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ತುಕಾರಾಂ ಏನೆಕಲ್ಲು, ಗುತ್ತಿಗಾರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಚೆನ್ನಮ್ಮ, ಪ್ರೌಢಶಾಲಾ ಮುಖ್ಯಶಿಕ್ಷಕಿ ಸಾವಿತ್ರಿ, ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕಿ ಉಮಾವತಿ, ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಧನಂಜಯ ಎನ್, ಯುವಜನ ಸಂಯುಕ್ತ ಮಂಡಳಿ ನಿರ್ದೇಶಕ ದಿನೇಶ್ ಹಾಲೆಮಜಲು ಉಪಸ್ಥಿತರಿದ್ದರು.
ಬಾಲಕರ ವಿಭಾಗದಲ್ಲಿ 7 ತಂಡಗಳು ಹಾಗೂ ಬಾಲಕಿಯರ ವಿಭಾಗದಲ್ಲಿ 7 ತಂಡಗಳು ಭಾಗವಹಿಸಿದ್ದವು. ಬಾಲಕರ ವಿಭಾಗದಲ್ಲಿ ಪುತ್ತೂರು ತಾಲೂಕು ಪ್ರಥಮ ಹಾಗೂ ಮಂಗಳೂರು ಉತ್ತರ ದ್ವಿತೀಯ ಸ್ಥಾನ ಪಡೆಯಿತು. ಬಾಲಕಿಯರ ವಿಭಾಗದಲ್ಲಿ ಪುತ್ತೂರು ತಾಲೂಕು ಪ್ರಥಮ ಹಾಗೂ ಮಂಗಳೂರು ದಕ್ಷಿಣ ದ್ವಿತೀಯ ಸ್ಥಾನ ಪಡೆಯಿತು.