

ರಾಯಚೂರು ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಬಡ ಜನರ ಆರ್ಥಿಕ ಅಭಿವೃದ್ಧಿಗೆ ಸಹಕಾರಿಯಾಗಿದ್ದು, ಪ್ರತಿ ಹಂತದ ಅಽಕಾರಿಗಳು ಗಂಭೀರವಾಗಿ ಪರಿಗಣಿಸಿ ಪ್ರಾಮಾಣಿಕತೆಯಿಂದ ಅರ್ಹ -Àಲಾನುಭವಿಗಳಿಗೆ ತಲುಪಿಸಬೇಕೆಂದು ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಽಕಾರದ ಜಿ¯್ಲÁಧ್ಯಕ್ಷರಾದ ಪಾಮಯ್ಯ ಮುರಾರಿ ಹೇಳಿದರು.
ನಗರದ ಜಿ¯್ಲÁ ಪಂಚಾಯತಿಯ ಜಲ ನಿರ್ಮಲ ಸಭಾಂಗಣದಲ್ಲಿ ಮಂಗಳವಾರ ಗ್ಯಾರಂಟಿ ಯೋಜನೆಗಳ ಜಿ¯್ಲÁ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಾರ್ವಜನಿಕರ ಸ್ಥಳಗಳು ಸೇರಿದಂತೆ ಕಚೇರಿಗಳಲ್ಲಿ ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಶಕ್ತಿ ಯೋಜನೆ, ಗೃಹಜ್ಯೋತಿ, ಗೃಹಲಕ್ಷ್ಮೀ ಹಾಗೂ ಯುವನಿಽ ಯೋಜನೆಗಳ ಬಗ್ಗೆ -Àಲಕವನ್ನು ಅಳವಡಿಸಬೇಕು. ಇದರಿಂದ ಸಾರ್ವಜನಿಕರಿಗೆ ಗ್ಯಾರಂಟಿ ಯೋಜನೆ ಬಗ್ಗೆ ಮಾಹಿತಿ ಪಡೆಯಲು ಸಹಕಾರಿಯಾಗಲಿದೆ ಎಂದರು.
ತಾಲೂಕು ಮತ್ತು ಗ್ರಾಮೀಣ ಮಟ್ಟದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮಹಿಳೆಯರಿಗೆ ಪಂಚ ಗ್ಯಾರೆಂಟಿ ಯೋಜನೆಗಳ ಕುರಿತು ಮಾಹಿತಿ ನೀಡಬೇಕು. ರೇಷನï ಕಾರ್ಡï ಆಧಾರï ಕಾರ್ಡï ತಿದ್ದುಪಡಿಯಂತಹ ಇ.ಕೆ.ವೈಸಿ ತಾಂತ್ರಿಕ ಸಮಸ್ಯೆಗಳನ್ನು ಸರಿಪಡಿಸಿ ಪ್ರತಿಯೊಬ್ಬ ಮಹಿಳೆಯರು ಈ ಯೋಜನೆಯ ಲಾಭವನ್ನು ಪಡೆದುಕೊಳ್ಳಬೇಕೆಂದರು.
ಬಡವರಿಗೆ ಗ್ಯಾರಂಟಿ ಯೋಜನೆಗಳ ಸೌಲಭ್ಯ ತಲುಪಿಸುವಲ್ಲಿ ವಿಳಂಬವಾಗಬಾರದು. ಸೌಲಭ್ಯಗಳನ್ನು ನಿಗದಿತ ಅವಽಯಲ್ಲಿಯೇ ತಲುಪಿಸುವಂತಾಗಬೇಕು. ಅರ್ಹರಿಗೆ ಅನುಕೂಲವಾಗುವಂತೆ ಪಂಚಗ್ಯಾರಅಟಿ ಯೋಜನೆಗಳ ಅನುಷ್ಠಾನವು ಶೇಕಡ ನೂರರಷ್ಟು ಪ್ರಗತಿಯಾಗಬೇಕು. ಗ್ಯಾರಂಟಿ ಯೋಜನೆಯ ಅನುಷ್ಠಾನದಲ್ಲಿ ಪ್ರಾಮಾಣಿಕತೆ ಇರಬೇಕು. ಅನರ್ಹರನ್ನು ದೂರ ಇಡಬೇಕು ಎಂದು ಸಂಬಅಽಸಿದ ಅಽಕಾರಿಗಳಿಗೆ ಸೂಚನೆ ನೀಡಿದರು.
ಜಿ¯್ಲÉಯಲ್ಲಿನ ಪ್ರತಿ ತಾಲೂಕು ಮಟ್ಟದಲ್ಲಿ ಜಿ¯್ಲÁ ಗ್ಯಾರಂಟಿ ಸಮಿತಿಯ ಅಧ್ಯಕ್ಷರು ಹಾಗೂ ಪ್ರತಿ ಗ್ರಾಮ ಪಂಚಾಯತಗಳ ಮಟ್ಟದಲ್ಲಿ ತಾಲೂಕು ಗ್ಯಾರಂಟಿ ಸಮಿತಿಗಳ ಅಧ್ಯಕ್ಷರುಗಳು ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಇಲ್ಲಿಯವರೆಗೂ ಸಾಽಸಿರುವ ಪ್ರಗತಿಯ ಪರಿಶೀಲನೆ ಹಾಗೂ ಶೇ.೧೦೦ರಷ್ಟು ಪ್ರಗತಿ ಸಾಽಸಲು ಸಂಬಅಧಪಟ್ಟ ಅಽಕಾರಿಗಳೊಂದಿಗೆ ಸಭೆ ನಡೆಸಬೇಕು.
ಸಾರ್ವಜನಿಕರು ಮತ್ತು -Àಲಾನುಭವಿಗಳೊಂದಿಗೆ ಮುಕ್ತ ಸಂವಾದ ನಡೆಸಬೇಕು. ಯೋಜನೆಗಳ ಪ್ರಯೋಜನೆ ಪಡೆಯುವಲ್ಲಿ ಏನಾದರು ತೊಂದರೆಗಳಿದ್ದಲ್ಲಿ ತಕ್ಷಣ ಸ್ಪಂದಿಸುವ ಕುರಿತು ಚರ್ಚೆ ಸಂವಾದ ನಡೆಸಲು ಕ್ರಮ ವಹಿಸಬೇಕು ಎಂದು ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಽಕಾರದ ರಾಜ್ಯ ಉಪಾಧ್ಯಕ್ಷರು ರಾಜ್ಯದ ಎಲ್ಲ ಜಿ¯್ಲÉಗಳ ಜಿ¯್ಲÁ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳಿಗೆ ಪತ್ರ ಬರೆದು ತಿಳಿಸಿದ್ಧಾರೆ. ಆದ್ದರಿಂದ ಈ ಕಾರ್ಯಕ್ರಮಕ್ಕೆ ಸಂಬಅಽಸಿದ ಇಲಾಖೆಗಳ ಅಽಕಾರಿಗಳು ಸಹಕಾರ ನೀಡಬೇಕು ಎಂದು ಅಧ್ಯಕ್ಷರಾದ ಪಾಮಯ್ಯ ಮುರಾರಿ ಅವರು ಸಭೆಯಲ್ಲಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಜಿಪಂ ಸಿಇಓ ರಾಹುಲ್ ತುಕಾರಾಂ ಪಾಂಡ್ವೆ , ಜಿ¯್ಲÁ ಮಟ್ಟದ ಸದಸ್ಯರಾದ ಎಚ್.ಪಿ ಬಸವರಾಜ ಬಿ,ಕೆ.ಅಮರೇಶ, ಪವನ ಪಾಟೀಲï, ಲಕ್ಷ್ಮಣ ಜ್ಯೋತಿ, ಮಹೆಬೂಬï ಸಾಬï, ವೆಂಕಟರಾವï, ಎಚï.ಬಸವರಾಜ ಗೋನವಾರ, ನಜೀರ ಪಂಜÁಬಿ, ಜಿ¯್ಲÁ ಪಂಚಾಯತಿಯ ಯೋಜನಾ ನಿರ್ದೇಶಕರಾದ ಡಾ.ಟಿ.ರೋಣಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ನವೀನï ಕುಮಾರï ಸೇರಿ ಅನೇಕರು ಇದ್ದರು.