ಜಿಲ್ಲಾ ಮಟ್ಟದ ವಿಜ್ಞಾನ ರಸಪ್ರಶ್ನೆ ಸ್ಪರ್ಧೆ ಯಲ್ಲಾಪುರ ನಂದೊಳ್ಳಿ ಪ್ರೌಢಶಾಲೆ ಪ್ರಥಮ

Quiz computation
Published on

ಕಾರವಾರ: ವಿಜ್ಞಾ ಮತ್ತು ತಂತ್ರಜ್ಞಾನ ಇಲಾಖೆ, ಭಾರತ ಸರಕಾರ, ವಿಜ್ಞಾನ ಪ್ರಸಾರ, ದೆಹಲಿ, ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ, ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ, ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉತ್ತರ ಕನ್ನಡ ಹಾಗೂ ಉಪ-ಪ್ರಾದೇಶಿಕ ವಿಜ್ಞಾನ ಕೇಂದ್ರ, ಕಾರವಾರ ಇವರ ಸಹಯೋಗದಲ್ಲಿ ಉತ್ತರ ಕನ್ನಡ ಜಿಲ್ಲೆಯ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ 8, 9 ಹಾಗೂ 10ನೇ ತರಗತಿಯ ವಿಜ್ಞಾನ ಹಾಗೂ ಸಾಮಾನ್ಯ ವಿಜ್ಞಾನ ವಿಷಯದ ಮೇಲೆ ಜಿಲ್ಲಾ ಮಟ್ಟದ ವಿಜ್ಞಾನ ರಸಪ್ರಶ್ನೆ ಸ್ಪರ್ಧೆಯನ್ನು ಇಂದು ಉಪ-ಪ್ರಾದೇಶಿಕ ವಿಜ್ಞಾನ ಕೇಂದ್ರ ಕಾರವಾರದಲ್ಲಿ ನಡೆಯಿತು.
ಜಿಲ್ಲಾ ಪಂಚಾಯತ್ ಎನ್.ಆರ್.ಡಿ.ಎಮ್.ಎಸ್. ತಾಂತ್ರಿಕ ಅಧಿಕಾರಿ ಅನಿಲ ನಾಯ್ಕ ಸಸಿಗೆ ನೀರೆರೆಯುವ ಮೂಲಕ ಉದ್ಘಾಟಿಸಿ ಮಾತನಾಡಿ, ಇಂದಿನ ವಿಜ್ಞಾನ ಯುಗದಲ್ಲಿ ಹಲವಾರು ಹೊಸ ಹೊಸ ಅನ್ವೇಷಣೆಗಳು ನಡೆಯುತ್ತಿದ್ದು ವಿದ್ಯಾರ್ಥಿಗಳು ವೈಜ್ಞಾನಿಕವಾಗಿ ಸ್ಪರ್ಧಾತ್ಮಕ ಮನೋಭಾವವನ್ನು ಬೆಳೆಸಿಕೊಳ್ಳುವಂತಾಗಬೇಕು ಎಂದು ಹೇಳಿದರು.

ಇದನ್ನೂ ಓದಿ:


ಸ್ಪರ್ಧೆಯಲ್ಲಿ ಯಲ್ಲಾಪುರದ ನಂದೊಳ್ಳಿ ಸರಕಾರಿ ಪ್ರೌಢಶಾಲೆ ಪ್ರಥಮ ಬಹುಮಾನ, ಶಿರಸಿಯ ಶ್ರೀ ಮಾರಿಕಾಂಬಾ ಸರಕಾರಿ ಪ್ರೌಢಶಾಲೆ ದ್ವಿತೀಯ ಬಹುಮಾನ, ಭಟ್ಕಳದ ವಿದ್ಯಾಭಾರತಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ತೃತೀಯ ಬಹುಮಾನ ಹಾಗೂ ಹೊನ್ನಾವರದ ಅನಿಲಗೋಡ ಜನತಾ ವಿದ್ಯಾಲಯವು ಸಮಾಧಾನಕರ ಬಹುಮಾನ ಪಡೆದುಕೊಂಡವು.
ಯಲ್ಲಾಪುರದ ಹೊಲಿ ರೋಜರಿ ಪ್ರೌಢಶಾಲಾ ವಿಜ್ಞಾನ ಶಿಕ್ಷಕ ಎಂ. ರಾಜಶೇಖರ ಇವರು ರಸಪ್ರಶ್ನೆ ಸ್ಪರ್ಧೆಯನ್ನು ಯಶಸ್ವಿಯಾಗಿ ನಡೆಸಿಕೊಟ್ಟರು. ಸ್ಪರ್ಧೆಯಲ್ಲಿ ಜಿಲ್ಲೆಯ 11 ತಾಲೂಕುಗಳಿಂದ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಸೇರಿ 35 ಜನರು ಪಾಲ್ಗೊಂಡ್ಡಿದ್ದರು.
ಉಪ-ಪ್ರಾದೇಶಿಕ ವಿಜ್ಞಾನ ಕೇಂದ್ರದ ಸದಸ್ಯ ಕಾರ್ಯದರ್ಶಿ ಡಾ. ಸಂಜೀವ ದೇಶಪಾಂಡೆ ಇವರು ಪ್ರಾಸ್ತಾವಿಕ ಮಾತನ್ನಾಡಿ ಸ್ವಾಗತಿಸಿದರು. ಕವಿತಾ ಬಾಡಕರ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net