

ಹಂಸಭಾವಿ: ಗ್ರಾಮದ ನಾಗೂಬಾಯಿ ಮಾಮಲೇದೇಸಾಯಿ ಬಾಲಿಕಾ ಪ್ರೌಢಶಾಲೆಯ ವಿದ್ಯಾರ್ಥಿನಿಯರು ಹಿರೇಕೆರೂರು ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಬಾಲ್ ಬ್ಯಾಡ್ಮಿಂಟನ್‌ನಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿಗಳ ಸಾಧನೆಗೆ ಆಡಳಿತ ಮಂಡಳಿ ಸದಸ್ಯ ಎನ್.ಸಿ. ಅಕ್ಕಿ, ಮುಖ್ಯೋಪಾಧ್ಯಾಯ ಜೆ.ಎಫ್. ಸೋಮಸಾಗರ ಹಾಗೂ ಶಿಕ್ಷಕರು ಹರ್ಷ ವ್ಯಕ್ತಪಡಿಸಿದ್ದಾರೆ.