

ಗದಗ: ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಜ್ಞಾನಗಂಗೋತ್ರಿ ಪದವಿ ಪೂರ್ವ ಕಾಲೇಜ್ ಪಾಪನಾಸಿ ಇವರುಗಳ ಸಂಯುಕ್ತ ಆಶ್ರಯದಲ್ಲಿ ದಿನಾಂಕ:- 28-08-2024 ಹಾಗೂ 29-08-2024 ಗದಗ ತಾಲೂಕ ವಲಯದ ಎಲ್ಲಾ ಕಾಲೇಜುಗಳ ವಿದ್ಯಾರ್ಥಿ ವಿದ್ಯಾರ್ಥಿನಿಯರ ತಾಲೂಕು ಮಟ್ಟದ ವೈಯಕ್ತಿಕ ಹಾಗೂ ಗುಂಪು ಆಟಗಳ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಈ ಕ್ರೀಡಾ ಸ್ಪರ್ಧೆಗಳಲ್ಲಿ ಗದುಗಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಆದರ್ಶ ಶಿಕ್ಷಣ ಸಂಸ್ಥೆಯ ಶ್ರೀ ದೇವದತ್ತ ಶಂಕರ್ ರಾವ್ ಕುರ್ತಕೋಟಿ ಪದವಿ ಪೂರ್ವ ವಾಣಿಜ್ಯ ಮಹಾವಿದ್ಯಾಲಯದ ವಿದ್ಯಾರ್ಥಿಗಳು ವಿದ್ಯಾರ್ಥಿನಿಯರು ವಿವಿಧ ಸ್ಪರ್ಧೆಗಳಲ್ಲಿ ಜಯಗಳಿಸಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ ವಿಜೇತ ಕ್ರೀಡಾಪಟುಗಳಿಗೆ ಹಾಗೂ ದೈಹಿಕ ನಿರ್ದೇಶಕರಾದ ಶ್ರೀ ಆದಿತ್ಯ ಜೋಷಿ ಅವರಿಗೆ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ಕೆ ವಿ ಕುಷ್ಟಗಿ ಚೇರ್ಮನ್ ಶ್ರೀ ಆನಂದ್ ಎಲ್ ಪೋತ್ನಿಸ್ ಉಪಾಧ್ಯಕ್ಷರಾದ ಶ್ರೀ ಪಿ ಆರ್ ಅಡವಿ ಕಾರ್ಯದರ್ಶಿಗಳಾದ ಶ್ರೀ. ಎ. ಡಿ ಗೋಡಖಿಂಡಿ ಹಾಗೂ ಆಡಳಿತ ಮಂಡಳಿಯ ಸರ್ವ ಸದಸ್ಯರು ಮತ್ತು ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ಶ್ರೀ ಆರ್ ಆರ್ ಕುಲಕರ್ಣಿ ಮತ್ತು ಸಿಬ್ಬಂದಿ ವರ್ಗದವರು ಶುಭ ಹಾರೈಸಿ ಜಿಲ್ಲಾ ಮಟ್ಟಕ್ಕೆ ಶುಭ ಕೋರಿರುತ್ತಾರೆ ಇದೆ ಒಂದು ಸಂದರ್ಭದಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ ನಿಮಿತ್ಯ ಹಾಕಿ ಮಾಂತ್ರಿಕ ಮೇಜರ್ ಧ್ಯಾನಚಂದ ರವರ ಭಾವಚಿತ್ರಕ್ಕೆ ಪುಷ್ಪ ಅರ್ಪಿಸುವ ಮೂಲಕ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಕಾರ್ಯಕ್ರಮವನ್ನು ಕೂಡ ಆಚರಿಸಲಾಯಿತು.