ಕ್ರೀಡಾಕೂಟಗಳಿಗೆ ಹೆಚ್ಚಿನ ನೆರವು: ಶಾಸಕ ರವಿಕುಮಾರ್ ಗಣಿಗ ಹೇಳಿಕೆ

1 (4)
Published on

ಮಂಡ್ಯ: ಕ್ರೀಡಾಕೂಟಗಳಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಆರ್ಥಿಕ ನೆರವು ಒದಗಿಸಲಾಗುವುದು ಎಂದು ಶಾಸಕ ರವಿಕುಮಾರ್ ಗಣಿಗ ಹೇಳಿದರು.

ನಗರದ ಪಿಇಟಿ ಈಜುಕೇಂದ್ರದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತ ಇಲಾಖೆ ದೈಹಿಕ ಶಿಕ್ಷಣ ವಿಭಾಗದಿಂದ ಆಯೋಜಿಸಿದ್ದ ಜಿಲ್ಲಾಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದ ಅವರು, ಓದಿನಷ್ಟೇ ಕ್ರೀಡಾ ಚಟುವಟಿಕೆಗಳು ಅಗತ್ಯ. ಅಧಿಕಾರಿಗಳು ಹೇಳಿದ ರೀತಿ ಕ್ರೀಡೆಗೆ ಹೆಚ್ಚಿನ ಆರ್ಥಿಕ ನೆರವು ಇಲ್ಲ. ಮುಂದಿನ ದಿನದಲ್ಲಿ ಹೆಚ್ಚಿನ ನೆರವು ನೀಡುತ್ತೇವೆ ಎಂದರು.

ಡಿಡಿಪಿಐ ಎಚ್.ಶಿವರಾಮೇಗೌಡ ಮಾತನಾಡಿ, ಕ್ರೀಡೆಗಳಲ್ಲಿ ಸೋಲು-ಗೆಲುವಿನ ಪ್ರಶ್ನೆಗಳಿರುವುದಿಲ್ಲ. ಎಲ್ಲವನ್ನೂ ಸ್ಪರ್ಧಾತ್ಮಕವಾಗಿ ಸ್ವೀಕರಿಸಿಬೇಕು. ವಿದ್ಯಾರ್ಥಿಗಳು ಕ್ರೀಡಾ ಮನೋಭಾವದಿಂದ ಸ್ಪರ್ಧೆಯಲ್ಲಿ ಭಾಗವಹಿಸಬೇಕು ಎಂದರು.

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ನಾಗೇಶ್ ಮಾತನಾಡಿ, ಪಿಇಟಿ ಅಧ್ಯಕ್ಷ ಕೆ.ಎಸ್.ವಿಜಯಾನಂದ ಅವರು ಕ್ರೀಡಾಕೂಟಕ್ಕೆ ಸಹಕಾರ ನೀಡಿದ್ದಾರೆ. ಆದ್ದರಿಂದ ಅವರ ಸಹಕಾರವನ್ನು ಶ್ಲಾಘಿಸುತ್ತೇವೆ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಉದಯಕುಮಾರ್, ಸೌಭಾಗ್ಯ, ರೇಣುಕಮ್ಮ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಎನ್.ಸಿ.ರಾಜು, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಕುಮಾರಸ್ವಾಮಿ, ಮಹೇಶ್, ಶ್ರೀದೇವಿ, ಎಂ.ವಿಜಯ್‌ಕುಮಾರ್, ಜ್ಞಾನಪೂರ್ಣ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net