

ಮಂಡ್ಯ: ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ 2024-25ನೇ ಸಾಲಿನ ಸೆ.11ರಂದು ಹಿರಿಯ ನಾಗರಿಕರಿಗಾಗಿ ಜಿಲ್ಲಾ ಮಟ್ಟದಲ್ಲಿ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆ ಏರ್ಪಡಿಸಲಾಗಿದೆ.
ಮ್ಯೂಸಿಕಲ್ ಚೇರ್, ಬಿರುಸಿನ ನಡಿಗೆ, ಬಕೆಟ್‌ನಲ್ಲಿ ಬಾಲ್ ಎಸೆಯುವುದು ಹಾಗೂ ಗಾಯನ, ಏಕಪಾತ್ರಾಭಿನಯ ಸ್ಪರ್ಧೆ ಆಯೋಜಿಸಲಾಗಿದೆ. 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು(ಪುರುಷರು ಹಾಗೂ ಮಹಿಳೆಯರು) ಭಾಗವಹಿಸಬಹುದು. ಆಸಕ್ತ ಹಿರಿಯ ನಾಗರಿಕರು ಅಂದು ಬೆಳಗ್ಗೆ 10ಗಂಟೆಗೆ ಸರ್‌ಎಂವಿ ಒಳಾಂಗಣ ಕ್ರೀಡಾಂಗಣ ಆವರಣದಲ್ಲಿ ಹಾಜರಾಗಬಹುದು. ಹಿರಿಯ ನಾಗರಿಕರ ಗುರುತಿನ ಚೀಟಿ/ ವಯಸ್ಸಿನ ದಾಖಲೆ ಕಡ್ಡಾಯವಾಗಿ ತರಬೇಕು. ಮಾಹಿತಿಗೆ ಮೊ.ಸಂ 7026223664 ಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.