

ರಾಯಚೂರು ಕರ್ತವ್ಯ ನಿರ್ವಹಣೆಯಲ್ಲಿ ಎಷ್ಟೇ ಒತ್ತಡಗಳಿದ್ದರು ವೈಯಕ್ತಿಕ ಆರೋಗ್ಯಕ್ಕೂ ಸಹ ನೌಕರರು ಗಮನ ನೀಡಬೇಕು. ಆರೋಗ್ಯದ ಹಿತದೃಷ್ಠಿಯಿಂದ ನೌಕರರು ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಬೇಕು ಎಂದು ಜಿಪಂ ಸಿಇಓ ರಾಹುಲ್ ತುಕಾರಾಂ ಪಾಂಡ್ವೆ ಹೇಳಿದರು.
ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕ ಮಂಗಳವಾರ ಆಯೋಜನೆ ಮಾಡಲಾಗಿದ್ದ ಜಿಲ್ಲಾಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು ೨೦೨೪-೨೫ಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಕ್ರೀಡೆಗಳಿಂದ ನಮ್ಮ ಆರೋಗ್ಯ ಪರಿಸ್ಥಿತಿ ಸುಧಾರಿಸಲಿದೆ. ವೃತ್ತಿಜೀವನದಲ್ಲಿ ಎದುರಾಗುವ ಒತ್ತಡ ಸನ್ನಿವೇಶಗಳನ್ನು ಸಮರ್ಪಕವಾಗಿ ನಿಭಾಯಿಸುವ ಸಾಮರಸ್ಯವನ್ನು ನೌಕರರು ಬೆಳೆಸಿಕೊಳ್ಳಬೇಕು. ಕ್ರೀಡಾಕೂಟದಿಂದ ನೌಕರರಲ್ಲಿ ಬಾಂಧವ್ಯ, ಹೊಂದಾಣಿಕೆ ಹೆಚ್ಚಾಗುತ್ತದೆ ಎಂದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಈರೇಶ ನಾಯಕ ಮಾತನಾಡಿ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರ ಮಾರ್ಗದರ್ಶನದಲ್ಲಿ ವಿವಿಧ ಸಮಿತಿಗಳು ಸತತ ೧೫ ದಿನಗಳ ಕಾಲ ಪರಿಶ್ರಮವಹಿಸಿದ್ದರಿಂದ ಈ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ಆಯೋಜನೆ ಮಾಡಲು ಸಾಧ್ಯವಾಗಿದೆ ಎಂದು ತಿಳಿಸಿದರು. ಓಟ, ಎತ್ತರ ಜಿಗಿತ, ಗುಂಡು ಎಸೆತ, ಕಬಡ್ಡಿ, ಖೋ-ಖೋ, ವಾಲಿಬಾಲ್, ಥ್ರೋಬಾಲ್. ಕ್ರಿಕೆಟ್, ಹಾಕಿ, -ÀÅಟ್ಬಾಲ್, ಯೋಗಾಸನ, ಬಾಲ್ ಬ್ಯಾಡ್ಮಿಂಟನ್, ಟೇಬಲ್ ಟೆನ್ನಿಸ್, ಕೇರಂ, ಚದುರಂಗ, ಬಾಸ್ಕೆಟ್ ಬಾಲ್, ಈಜು ಸೇರಿದಂತೆ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಲು ನೌಕರರಿಗೆ ಅವಕಾಶ ಕಲ್ಪಿಸಲಾಗಿದೆ ಎಂದರು.
೭ ತಂಡಗಳು, ೧೦೨೦ ನೌಕರರು ಭಾಗಿ;
ಎರಡು ದಿನಗಳ ಕಾಲ ನಡೆಯುವ ಕ್ರೀಡಾಕೂಟದಲ್ಲಿ ಕಬ್ಬಡ್ಡಿ, ಖೋಖೋ, ವಾಲಿಬಾಲ್, ಚೆಸ್, ಬ್ಯಾಡ್ಮಿಂಟನ್, ಲಾಂಗ್ ಜಂಪ್, ಶಾಟಪುಟ್, ಡಿಸ್ಕಸ್ ಥ್ರೋ, ಜÁವಲಿನ್ ಥ್ರೋ, ರನ್ನಿಂಗ್ ಸೇರಿದಂತೆ ವಿವಿಧ ಸ್ಪರ್ಧೆಗಳು ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಜಿಲ್ಲೆಯ ಏಳು ತಾಲೂಕುಗಳ ೭ ತಂಡಗಳ ಸುಮಾರು ೧೦೨೦ ನೌಕರರು ಭಾಗವಹಿಸಲಿದ್ದಾರೆ.
ಈ ಸಂದರ್ಭದಲ್ಲಿ ಅಪರ ಜಿಲ್ಲಾಽಕಾರಿ ಶಿವಾನಂದ, ನೌಕರರ ಸಂಘದ ಜಿಲ್ಲಾಧ್ಯಕ್ಷ ಕೃಷ್ಣ ಶಾವಂತಗೇರಿ, ಕಾರ್ಯಾಧ್ಯಕ್ಷರಾದ ಡಾ.ಶಂಕರಗೌಡ ಪಾಟೀಲ, ಉಪಾಧ್ಯಕ್ಷರಾದ ಚಂದ್ರಶೇಖರ ಹಿರೇಮಠ, ದೊಡ್ಡ ನಿಂಗಪ್ಪ, À ಭೀಮರಾಜ ಹವಾಲ್ದಾರ್, ಭೀಮೇಶ ನಾಯಕ, ಹನುಮಂತ್ರಾಯ ಶಾಖೆ, ಆರೀ-ï ಮಿಯಾ, ಸುರೇಶ ಕುರ್ಡಿ, ಹಾಜಿ ಬಾಬು, ಪಂಪಾಪತಿ ಹೂಗಾರ ಸೇರಿದಂತೆ ಅನೇಕರು ಇದ್ದರು.