

ವಿಜಯವಾಣಿ ಸುದ್ದಿಜಾಲ ಕಾರ್ಕಳ
ಉಡುಪಿ ಜಿಲ್ಲಾ ಪಂಚಾಯಿತಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಡುಪಿ ಮತ್ತು ಹಿಂದು ಪ್ರೌಢಶಾಲೆ ಶಿರ್ವ ಆಶ್ರಯದಲ್ಲಿ ಬುಧವಾರ ನಡೆದ ಉಡುಪಿ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಬಾಲಕ-ಬಾಲಕಿಯರ ಥ್ರೋಬಾಲ್ ಟೂರ್ನಿಯ 14ನೇ ವಯೋಮಿತಿಯ ಬಾಲಕರ ವಿಭಾಗದಲ್ಲಿ ಕಾರ್ಕಳ ಇರ್ವತ್ತೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಪ್ರಥಮ ಹಾಗೂ 17ರ ವಯೋಮಿತಿಯ ಬಾಲಕರ ವಿಭಾಗದಲ್ಲಿ ಅಜೆಕಾರು ಚರ್ಚ್ ಸ್ಕೂಲ್ ಪ್ರಥಮ ಸ್ಥಾನ ಪಡೆಯಿತು.
14ರ ವಯೋಮಿತಿಯ ಬಾಲಕಿಯರ ವಿಭಾಗದಲ್ಲಿ ಬೈಂದೂರು ಆಲೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಪ್ರಥಮ ಸ್ಥಾನ ಪಡೆದ್ದು, ಕುಚ್ಚೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ದ್ವಿತೀಯ ಸ್ಥಾನಕ್ಕೆ ತೃಪ್ತಿಗೊಂಡಿತು. 17ನೇ ವಯೋಮಿತಿ ವಿಭಾಗದಲ್ಲಿ ಬೈಂದೂರು ಆಲೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಪ್ರಥಮ ಸ್ಥಾನ ಪಡೆದಿದ್ದು, ಶಿರ್ವ ಹಿಂದು ಪ್ರೌಢಶಾಲೆ ದ್ವಿತೀಯ ಸ್ಥಾನಿಯಾಗಿದೆ.
ಸಮಾರೋಪ ಸಮಾರಂಭದಲ್ಲಿ ವಿದ್ಯಾವರ್ಧಕ ಸಂಘದ ಆಡಳಿತಾಧಿಕಾರಿ ಪ್ರೊ.ವೈ.ಭಾಸ್ಕರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಶಿರ್ವ ಗ್ರಾಪಂ ಮಾಜಿ ಅಧ್ಯಕ್ಷ ಆರ್.ಪಾಟ್ಕರ್ ಮತ್ತು ಹಿಂದು ಪ್ರೌಢಶಾಲೆ ನಿವೃತ್ತ ಮುಖ್ಯ ಶಿಕ್ಷಕಿ ಶಕಿಲಾ ವಿಜೇತ ತಂಡಗಳಿಗೆ ಬಹುಮಾನ ವಿತರಿಸಿದರು.
ಉಡುಪಿ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಚಂದ್ರಶೇಖರ ಶೆಟ್ಟಿ, ಕಾರ್ಕಳ ವಲಯದ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ರವಿಚಂದ್ರ ಕಾರಂತ್, ಉಡುಪಿ ವಲಯದ ದೈಹಿಕ ಶಿಕ್ಷಣ ಸಂಘದ ಅಧ್ಯಕ್ಷ ಚಂದ್ರಶೇಖರ ಸುವರ್ಣ, ಉಡುಪಿ ಜಿಲ್ಲೆ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಉಪಾಧ್ಯಕ್ಷ ಕಿರಣ್ ಶೆಟ್ಟಿ, ಉಡುಪಿ ಟಿಪಿಒ ರವೀಂದ್ರ ನಾಯ್ಕ, ಹಿಂದು ಪ.ಪೂ ಕಾಲೇಜಿನ ಪ್ರಾಂಶುಪಾಲ ಭಾಸ್ಕರ ಎ. ದೈಹಿಕ ಶಿಕ್ಷಣ ಉಪನ್ಯಾಸಕ ದೇವೆಂದ್ರ ಹೆಗ್ಡೆ, ಉಪಸ್ಥಿತರಿದ್ದರು. ನವೀನ್ ಶೆಟ್ಟಿ ಇನ್ನಂಜೆ ಪ್ರಸ್ತಾವನೆಗೈದರು. ಪ್ರೌಢಶಾಲಾ ಮುಖ್ಯ ಶಿಕ್ಷಕಿ ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಸುರೇಂದ್ರನಾಥ ಶೆಟ್ಟಿ ವಂದಿಸಿದರು. ಉಪನ್ಯಾಸಕಿ ಯಶೋದಾ ಮತ್ತು ಶಿಕ್ಷಕಿ ಸುಪ್ರೀತಾ ಕಾರ್ಯಕ್ರಮ ನಿರೂಪಿಸಿದರು.