

ಶಿರ್ವ: ಕ್ರೀಡೆಯಲ್ಲಿ ಸೋಲು ಗೆಲುವು ಸಾಮಾನ್ಯ. ಆದರೆ ಕ್ರೀಡೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸುವುದು ಮುಖ್ಯ ಎಂದು ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ಯಲ್ಲಮ್ಮ ಹೇಳಿದರು.
ಉಡುಪಿ ಜಿಪಂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಶಿರ್ವ ಹಿಂದು ಪ್ರೌಢಶಾಲೆ ಆಶ್ರಯದಲ್ಲಿ ಹಿಂದು ಪಪೂ ಕಾಲೇಜು ಕ್ರೀಡಾಂಗಣದಲ್ಲಿ ಗುರುವಾರ ಉಡುಪಿ ಜಿಲ್ಲಾಮಟ್ಟದ ಪ್ರಾಥಮಿಕ, ಪ್ರೌಢಶಾಲಾ ವಿಭಾಗದ ಬಾಲಕ-ಬಾಲಕಿಯರ ಥ್ರೋಬಾಲ್ ಟೂರ್ನಿ ಉದ್ಘಾಟಿಸಿ ಮಾತನಾಡಿದರು.
ವಿದ್ಯಾವರ್ಧಕ ಸಂಘ ಆಡಳಿತಾಧಿಕಾರಿ ಪ್ರೊ.ವೈ.ಭಾಸ್ಕರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು ಶಿರ್ವ ಗ್ರಾಪಂ ಅಧ್ಯಕ್ಷೆ ಸವಿತಾ ರಾಜೇಶ್, ಹಿಂದು ಪಪೂ ಕಾಲೇಜು ಹಳೇ ವಿದ್ಯಾರ್ಥಿ ಸಂಘ ಅಧ್ಯಕ್ಷ ರಮಾನಂದ ಶೆಟ್ಟಿಗಾರ್ ಶುಭಹಾರೈಸಿದರು. ಉಡುಪಿ ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಅಧ್ಯಕ್ಷ ವಿಜಯ್‌ಕುಮಾರ್ ಶೆಟ್ಟಿ, ಉಡುಪಿ ವಲಯ ದೈಹಿಕ ಶಿಕ್ಷಣ ಶಿಕ್ಷಕರ ಪರಿವೀಕ್ಷಣಾಧಿಕಾರಿ ರವೀಂದ್ರ ನಾಯ್ಕ, ಕಾಪು ವಲಯ ಯುವ ಸಬಲೀಕರಣ, ಕ್ರೀಡಾಧಿಕಾರಿ ರಿತೇಶ್ ಕುಮಾರ್ ಶೆಟ್ಟಿ, ಉಡುಪಿ ವಲಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಅಧ್ಯಕ್ಷ ಚಂದ್ರಶೇಖರ ಸುವರ್ಣ, ಕಾರ್ಕಳ ವಲಯ ದೈಹಿಕ ಶಿಕ್ಷಣ ಶಿಕ್ಷಕರ ಪರಿವೀಕ್ಷಣಾಧಿಕಾರಿ ರವಿಚಂದ್ರ ಕಾರಂತ್, ಕರ್ಣಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಉಪಾಧ್ಯಕ್ಷ ರಾಜಾರಾಂ ಶೆಟ್ಟಿ, ಕಿಶನ್‌ರಾಜ್ ಶೆಟ್ಟಿ ಗ್ರೇಡ್ 2 ದೈಹಿಕ ಶಿಕ್ಷಣ ಶಿಕ್ಷಕರ ಸಂಘ, ಉಡುಪಿ, ಪಪೂ ಕಾಲೇಜು ಪ್ರಾಂಶುಪಾಲ ಭಾಸ್ಕರ ಎ, ದೈಹಿಕ ಶಿಕ್ಷಣ ಉಪನ್ಯಾಸಕ ದೇವೇಂದ್ರ ಹೆಗ್ಡೆ ಉಪಸ್ಥಿತರಿದ್ದರು. ಪ್ರೌಢಶಾಲಾ ಮುಖ್ಯಶಿಕ್ಷಕಿ ವಸಂತಿ ಸ್ವಾಗತಿಸಿದರು. ಉಡುಪಿ ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿ ಚಂದ್ರಶೇಖರ ಶೆಟ್ಟಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಸುರೇಂದ್ರನಾಥ ಶೆಟ್ಟಿ ವಂದಿಸಿದರು. ಉಪನ್ಯಾಸಕ ಯಶೋದಾ, ಶಿಕ್ಷಕಿ ಸುಪ್ರೀತಾ ನಿರೂಪಿಸಿದರು.