ಎಂಜಿಎಂಗೆ ಸಂಸ್ಥೆಗೆ ಗೆಲುವಿನ ಮುಕುಟ

basket
ಬಾಸ್ಕೆಟ್‌ಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದ ಉಡುಪಿಯ ಎಂ.ಜಿ.ಎಂ ಪದವಿ ಪೂರ್ವ ಕಾಲೇಜಿನ ಬಾಲಕ ತಂಡ
Published on

ವಿಜಯವಾಣಿ ಸುದ್ದಿಜಾಲ ಕಾರ್ಕಳ

ಶಾಲಾ ಶಿಕ್ಷಣ ಇಲಾಖೆ ಹಾಗೂ ಗಣಿತ ನಗರದ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ ಬಾಲಕ ಬಾಲಕಿಯರ ಬಾಸ್ಕೆಟ್ ಬಾಲ್ ಟೂರ್ನಿಯಲ್ಲಿ ಉಡುಪಿಯ ಎಂ.ಜಿ.ಎಂ ಪದವಿ ಪೂರ್ವ ಕಾಲೇಜಿನ ಬಾಲಕ ಹಾಗೂ ಬಾಲಕಿಯರ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ.

ಕಾರ್ಕಳ ಜ್ಞಾನಸುಧಾ ಪ.ಪೂ.ಕಾ.ಬಾಲಕಿಯರ ತಂಡ ಹಾಗೂ ನಿಟ್ಟೆಯ ಡಾ.ಎನ್.ಎಸ್.ಎ.ಎಂ ಪ.ಪೂ. ಕಾಲೇಜಿನ ಬಾಲಕರ ತಂಡ ದ್ವಿತೀಯ ಸ್ಥಾನ ಪಡೆದಿದೆ. ಬಳಿಕ ನಡೆದ ಸಮಾರೋಪದಲ್ಲಿ ಕಾರ್ಕಳದ ಎಸ್‌ಎನ್‌ವಿ ಪ.ಪೂ.ಕಾಲೇಜಿನ ಪ್ರಾಂಶುಪಾಲ ಪ್ರದೀಪ್ ಎನ್ ಶುಭಹಾರೈಸಿದರು. ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಿನೇಶ್ ಎಂ.ಕೊಡವೂರ್ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ಜಿಲ್ಲಾ ದೈ.ಶಿ.ಉಪನ್ಯಾಸಕ ಸಂಘದ ಅಧ್ಯಕ್ಷ ಸತೀಶ್ ಹೆಗ್ಡೆ, ತಾಲೂಕು ದೈಹಿಕ ಶಿಕ್ಷಣ ಉಪನ್ಯಾಸಕ ಸಂಘದ ಮೇಲ್ವಿಚಾರಕ ರವೀಂದ್ರ ಶೆಟ್ಟಿ, ಸಾಹಿತ್ಯ ಹಾಗೂ ವಾಣಿ ಕೆ, ಪಿ.ಆರ್.ಒ. ಜ್ಯೋತಿ ಪದ್ಮನಾಭ ಭಂಡಿ, ಅರುಣ್ ಕುಮಾರ್, ಕಿರಣ್ ಹಾಗೂ ರೇಷ್ಮಾ ಸಾಲಿಸ್ ಉಪಸ್ಥಿತರಿದ್ದರು. ಸೌಜನ್ಯ ಹೆಗ್ಡೆ ವಂದಿಸಿದರು. ಸಂಗೀತಾ ಕುಲಾಲ್ ಕಾರ್ಯಕ್ರಮ ನಿರೂಪಿಸಿದರು. ವಿಜೇತ ತಂಡಗಳನ್ನು ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್‌ನ ಅಧ್ಯಕ್ಷ ಡಾ.ಸುಧಾಕರ್ ಶೆಟ್ಟಿ ಅಭಿನಂದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net