

ಹಿರಿಯೂರು: ನಗರದ ವ್ಯಾಪ್ತಿಯಲ್ಲಿ ಸಂಚಾರ ದಟ್ಟಣೆ ನಿಯಂತ್ರಣ-ಜನರ ಸುರಕ್ಷತೆಗೆ ಸಂಚಾರಿ ಪೊಲೀಸ್ ಠಾಣೆ ಸ್ಥಾಪಿಸುವಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರಿಗೆ ಶುಕ್ರವಾರ ಜಿಲ್ಲಾ ಸಚಿವ ಡಿ.ಸುಧಾಕರ್ ಮನವಿ ಮಾಡಿದರು.
ಬೆಂಗಳೂರಿನಲ್ಲಿ ಗೃಹ ಸಚಿವರನ್ನು ಭೇಟಿ ಮಾಡಿ, ಮನವಿ ಸಲ್ಲಿಸಿದ ಸಚಿವರು, ಹಿರಿಯೂರಿನಲ್ಲಿ ಎರಡು ರಾಷ್ಟ್ರೀಯ ಹೆದ್ದಾರಿ ಹಾದು ಹೋಗಿದ್ದು, ನಗರದಲ್ಲಿ ಸಂಚಾರ ದಟ್ಟಣೆ ಹೆಚ್ಚಾಗಿದೆ. ಇದರ ನಿಯಂತ್ರಣಕ್ಕೆ ಟ್ರಾಫಿಕ್ ಪೊಲೀಸ್ ಠಾಣೆಯನ್ನು ಮಂಜೂರು ಮಾಡಬೇಕು ಎಂದರು.
ಪೊಲೀಸರ ಆರೋಗ್ಯ ದೃಷ್ಟಿಯಿಂದ ವ್ಯಾಯಾಮ ಶಾಲೆ-ಕ್ರೀಡಾಂಗಣ ಬೇಕಿದೆ. ಸುಸಜ್ಜಿತ ವಸತಿ ಸಂಕೀರ್ಣ, ನಗರ-ಗ್ರಾಮಾಂತರ ಠಾಣೆಗೆ ಅಗತ್ಯ ಸಿಬ್ಬಂದಿ ನೇಮಕ ಮಾಡುವಂತೆ ಮನವಿ ಮಾಡಿದರು.
ಚಿತ್ರ(ಎಚ್ವೈಆರ್ ಟ್ರಾಫಿಕ್ 17)
ಹಿರಿಯೂರಿಗೆ ಸಂಚಾರ ಪೊಲೀಸ್ ಠಾಣೆ ಮಂಜೂರು ಮಾಡುವಂತೆ ಗೃಹ ಸಚಿವ ಪರಮೇಶ್ವರ್ ಅವರಿಗೆ ಜಿಲ್ಲಾ ಸಚಿವ ಡಿ.ಸುಧಾಕರ್ ಮನವಿ ಮಾಡಿದರು.