ದೈಹಿಕ ಸದೃಢತೆಗೆ ಕ್ರೀಡಾ ಚಟುವಟಿಕೆ ಪೂರಕ

udp-25-dc
Published on

ಉಡುಪಿ: ಪ್ರತಿಯೊಬ್ಬರ ದೈಹಿಕ ಸದೃಢತೆ ಹೊಂದಲು ಕ್ರೀಡಾ ಚಟುವಟಿಕೆಗಳು ಪೂರಕವಾಗಿವೆ. ಸದಾ ಕೆಲಸದ ಒತ್ತಡವನ್ನು ಅನುಭವಿಸುವ ಪೊಲೀಸರ ದೈಹಿಕ ಸಾಮರ್ಥ್ಯ ಹಾಗೂ ಸಾಮಾಜಿಕ ಒಲವು ಹೆಚ್ಚಿಸುವ ನಿಟ್ಟಿನಲ್ಲಿ ಕ್ರೀಡಾಕೂಟ ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಹೇಳಿದರು.

ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಪೊಲೀಸ್​ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು. ಸಮಾಜದಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಪೊಲೀಸ್​ ಇಲಾಖೆಯ ಸೇವೆ ಅಪಾರ. ಪೊಲೀಸ್​ ಅಧಿಕಾರಿ ಹಾಗೂ ಸಿಬ್ಬಂದಿ ದೈನಂದಿನ ಕರ್ತವ್ಯವನ್ನು ನಿಭಾಯಿಸಿಕೊಂಡು ಹೋಗುವುದರ ಜೊತೆಗೆ ಕ್ರೀಡಾ ಅಭಿರುಚಿ ಬೆಳೆಸಿಕೊಂಡಿರುವುದು ಉತ್ತಮ ವಿಚಾರ. ಕ್ರೀಡೆಗಳಲ್ಲಿ ಸೋಲು-ಗೆಲುವು ಸಹಜವಾಗಿದ್ದು, ಕ್ರೀಡೆಗಳಲ್ಲಿ ಭಾಗವಹಿಸುವುದು ಮುಖ್ಯ ಎಂದರು.

ಕರಾವಳಿ ಕಾವಲು ಪಡೆಯ ಪೊಲೀಸ್​ ಅಧೀಕ್ಷಕ ಮಿಥುನ್​ ಎಚ್​.ಎನ್​. ಮಾತನಾಡಿದರು. ಕ್ರೀಡಾಕೂಟದಲ್ಲಿ ವಿವಿಧ ಪೊಲೀಸ್​ ತಂಡಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು. ಡಿಎಆರ್​ ಉಡುಪಿಯ ಆರ್​.ಎಸ್​.ಐ ಅಮೀರ್​ ಪಾಶಾ ಪ್ರಮಾಣ ವಚನ ಬೋಧಿಸಿದರು. ಉಡುಪಿ ಡಿಎಆರ್​ ಎಪಿಸಿ ಜೀವನ್​ ನಾಯ್ಕ್​ ಕ್ರೀಡಾಜ್ಯೋತಿ ಪ್ರದರ್ಶಿಸಿದರು. ಜಿಲ್ಲಾ ಪೊಲೀಸ್​ ಅಧೀಕ್ಷಕ ಡಾ. ಅರುಣ್​ ಕೆ ಸ್ವಾಗತಿಸಿ, ಯೋಗೇಶ್​ ನಾಯ್ಕ್​ ನಿರೂಪಿಸಿ, ಎಎಸ್​ಪಿ ಎಸ್​.ಟಿ ಸಿದ್ದಲಿಂಗಪ್ಪ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net