ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅಣಿಗೊಳಿಸಬೇಕು

japar
ದೇವನಹಳ್ಳಿ ಜಿಪಂ ಸಭಾಂಗಣದಲ್ಲಿ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಪಿ.ಸಿ ಜಾಫರ್ ಮಾತನಾಡಿದರು. ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್, ಜಿಪಂ ಸಿಇಒ ಡಾ.ಕೆ.ಎನ್.ಅನುರಾಧಾ, ಅಪರ ಜಿಲ್ಲಾಧಿಕಾರಿ ಎಚ್.ಅಮರೇಶ್, ಉಪವಿಭಾಗಾಧಿಕಾರಿ ದುರ್ಗಶ್ರೀ ಇದ್ದರು.
Published on

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಪಿ.ಸಿ ಜಾಫರ್ ಸಲಹೆ

ಜಿಪಂ ಸಭಾಂಗಣದಲ್ಲಿ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ


ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ
ಇಂದಿನ ಕಾಲಮಾನದಲ್ಲಿ ಎಲ್ಲ ಕ್ಷೇತ್ರದಲ್ಲೂ ಸ್ಪರ್ಧೆ ಇದೆ, ವಿದ್ಯಾರ್ಥಿಗಳನ್ನು ಇಂಥ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅಣಿಗೊಳಿಸುವ ಮೂಲಕ ಅವರ ಭವಿಷ್ಯಕ್ಕೆ ಭದ್ರ ಬುನಾಧಿ ಹಾಕಬೇಕಾಗಿದೆ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಪಿ.ಸಿ ಜಾರ್ ಹೇಳಿದರು.
ದೇವನಹಳ್ಳಿ ತಾಲೂಕು ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಇತ್ತೀಚಿಗೆ ಹಮ್ಮಿಕೊಂಡಿದ್ದ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.ಸರ್ಕಾರಿ ಶಾಲಾ-ಕಾಲೇಜು, ವಸತಿ ಶಾಲೆಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ಪಠ್ಯದ ಜತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಅನುಕೂಲವಾಗುವಂತೆ ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಬೇಕು ಎಂದು ಹೇಳಿದರು.
ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳು, ವಿದ್ಯಾರ್ಥಿ ನಿಲಯಗಳಲ್ಲಿ ವಿದ್ಯಾಭ್ಯಾಸದ ಜತೆಗೆ ಭವಿಷ್ಯದ ಉನ್ನತ ವ್ಯಾಸಂಗಕ್ಕಾಗಿ ವಿದ್ಯಾರ್ಥಿಗಳನ್ನು ತಯಾರು ಮಾಡಬೇಕಾಗಿದೆ ಎಂದು ಸಲಹೆ ನೀಡಿದರು. ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ, ಪಿಯುಸಿ ತೇರ್ಗಡೆಯದ ನಂತರ ಜೆಇಇ, ನೀಟ್‌ನಂತಹ ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯುವ ಮೂಲಕ ಉನ್ನತ ವ್ಯಾಸಂಗಕ್ಕೆ ಹೋಗಬೇಕು. ಹಾಗಾಗಿ ವಸತಿ ಶಾಲೆಗಳು ಮತ್ತು ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುವ 9 ಮತ್ತು 10 ನೇ ತರಗತಿ ವಿದ್ಯಾರ್ಥಿಗಳಿಗೆ ಪಠ್ಯದ ಜತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯಲು ಅನುಕೂಲವಾಗುವಂತೆ ವಿದ್ಯಾರ್ಥಿಗಳನ್ನು ತರಬೇತುಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಜಾಗೃತಿ ಮೂಡಿಸಬೇಕು: ಎಲ್ಲ ಸರ್ಕಾರಿ ಆಸ್ಪತ್ರೆಗಳಿಗೆ ಕುಡಿಯುವ ನೀರು ಪೂರೈಕೆಯಲ್ಲಿ ತೊಂದರೆ ಆಗದಂತೆ ಕ್ರಮ ವಹಿಸಿ. ಶಿಶು ಮರಣ ಮತ್ತು ತಾಯಿ ಮರಣಗಳನ್ನು ತಡೆಯಲು ತಾಯಂದಿರಿಗೆ, ಆಶಾ ಕಾರ್ಯಕರ್ತೆಯರಿಗೆ ಹಾಗೂ ವೈದ್ಯರಿಗೆ ಸೂಕ್ತ ಮಾರ್ಗದರ್ಶನ ಮತ್ತು ತರಬೇತಿ ನೀಡಿ ಜಾಗೃತಿ ಮೂಡಿಸಬೇಕು ಎಂದು ಜಾರ್ ಸೂಚನೆ ನೀಡಿದರು. ಡೆಂಘೆ ನಿಯಂತ್ರಣಕ್ಕೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಜತೆಗೆ ಆಧಿಕಾರಿಗಳು ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ಹೇಳಿದರು.
ಗ್ಯಾರಂಟಿಗಳ ಪರಿಶೀಲನೆ:

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net