ಧಾರವಾಡ ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್,   ಕಲಘಟಗಿ ಗುಡ್ ನ್ಯೂಸ್ ಕಾಲೇಜು ವೀರಾಗ್ರಣಿ

IMG_20241022_204045_6.jpg
Published on

ಹುಬ್ಬಳ್ಳಿ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಹಾಗೂ ನಗರದ ಚೌಗಲಾ ಶಿಣ ಸಂಸ್ಥೆಯ ವಿದ್ಯಾನಿಕೇತನ ಪದವಿ ಪೂರ್ವ ವಿಜ್ಞಾನ ಮಹಾವಿದ್ಯಾಲಯಗಳ ಸಂಯುಕ್ತ ಆಶ್ರಯದಲ್ಲಿ ಧಾರವಾಡ ಜಿಲ್ಲಾ ಮಟ್ಟದ ಬಾಲಕ ಮತ್ತು ಬಾಲಕಿಯರ ಅಥ್ಲೆಟಿಕ್ಸ್ ಕ್ರೀಡಾಕೂಟ ಧಾರವಾಡದ ಆರ್.ಎನ್. ಶೆಟ್ಟಿ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆಯಿತು.

ಕಾರ್ಯಕ್ರಮ ಉದ್ಘಾಟಿಸಿದ ಪ್ರೊ. ಅನಿಲಕುಮಾರ ಚೌಗುಲೆ, ವಿದ್ಯಾರ್ಥಿಗಳಲ್ಲಿ ದೈಹಿಕ ಹಾಗೂ ಮಾನಸಿಕ ಸದೃಢತೆಯನ್ನು ತರುವಲ್ಲಿ ಕ್ರೀಡೆಗಳು ಮಹತ್ವದ್ದಾಗಿವೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಡಾ. ಆನಂದ ಮುಳಗುಂದ, ವಿದ್ಯಾರ್ಥಿಗಳು ಸೋಲು ಗೆಲುವನ್ನು ಸಮನಾಗಿ ಸ್ವೀಕರಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ಕ್ರೀಡಾಕೂಟದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ತಮ್ಮಲ್ಲಿರುವ ಪ್ರತಿಭೆ ಹೊರಹಾಕಬೇಕು ಎಂದರು.

ಅತಿಥಿಗಳಾಗಿದ್ದ ಪಪೂ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೆ.ಪಿ. ಸುರೇಶ, ಶ್ರೀದೇವಿ ಅನಿಲಕುಮಾರ ಚೌಗುಲೆ, ಮಂಜುನಾಥಸ್ವಾಮಿ ಎಂ.ಪಿ., ಯು.ಎನ್. ಹಜಾರೆ, ಪ್ರೊ. ಹನುಮಂತಪ್ಪ, ಸಂದೀಪ ಬೂದಿಹಾಳ ಉಪಸ್ಥಿತರಿದ್ದರು.

ಧಾರವಾಡ ಜಿಲ್ಲೆಯ ಎಂಟು ತಾಲೂಕುಗಳ ಸುಮಾರು 300ಕ್ಕೂ ಹೆಚ್ಚು ವಿದ್ಯಾಥಿರ್ಗಳು ಭಾಗವಹಿಸಿದ್ದರು. ಕಲಟಗಿ ಗುಡ್ ನ್ಯೂಸ್ ಮಹಾವಿದ್ಯಾಲಯದ ವಿದ್ಯಾರ್ತಿಗಳು ವೀರಾಗ್ರಣಿ ಪ್ರಶಸ್ತಿ ಮುಡಿಗೇರಿಸಿಕೊಂಡರು.

ವಿವಿಧ ತಂಡಗಳ ದೈಹಿಕ ಶಿಕ್ಷಣ ಶಿಕ್ಷಕರು ಹಾಗೂ ನಿರ್ದೇಶಕರು ಕಾರ್ಯಕ್ರಮ ನಿರ್ವಹಿಸಿದರು. ಪ್ರೊ. ರಾಜಕುಮಾರ ಹಿತ್ಲರ್ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net