

ರಾಯಚೂರು ಇತ್ತಿಚ್ಚಿಗೆ ಮಂಡನೆ ಮಾಡಿದ ಕೇಂದ್ರ ಬಜೆಟ್ ರೈತ, ಕಾರ್ಮಿಕ, ದಲಿತ ವಿರೋಽಯಾಗಿದೆಂದು ಆರೋಪಿಸಿ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಗುರುವಾರ ಸಂಯುಕ್ತ ಹೋರಾಟ - ಕರ್ನಾಟಕ ಸಂಘದ ಮುಖಂಡರು ವಿತ್ತ ಸಚಿವೆ ಭಾವಚಿತ್ರ ದಹಿಸಿ ಪ್ರತಿಭಟನೆ ಮಾಡಿದರು.
ಕೇಂದ್ರ ಬಜೆಟ್ ಕಾರ್ಪೋರೆಟ್ ಕಂಪನಿಗಳ ಪರವಾಗಿ ಮಂಡಿಸಿ, ದೇಶದಲ್ಲಿ ಬಡತನ, ಉದ್ಯೋಗ, ಶಿಕ್ಷಣ, ವಿದ್ಯಾರ್ಥಿ, ಮಹಿಳೆಯರ, ಮತ್ತು ರೈತರ ಆಹಾರ ಭದ್ರತೆಗೆ ಆಧ್ಯತೆ ನೀಡದ ಬಜೆಟ್‌ನ್ನು ವಿರೋಽಸಿದರು. ಬೆಲೆ ಏರಿಕೆ. ನಿರುದ್ಯೋಗ, ಬಡತನ, ಹಸಿವು, ವಲಸೆ ಮುಂತಾದ ಆರ್ಥಿಕ ಸಮಸ್ಯೆಗಳನ್ನು ನಿವಾರಿಸುವ ಉಳ್ಳ ಬಜೆಟ್ ಆಗಿ ಮರು ರೂಪಿಸಬೇಕು. ಉದ್ಯೋಗ ಸೃಷ್ಟಿಗೆ ಸಂಪೂರ್ಣ ಒತ್ತು ನೀಡಬೇಕು. ಖಾಸಗೀಕರಣ
ನೀತಿಗಳನ್ನು ಸಂಪೂರ್ಣವಾಗಿ ಕೈ ಬಿಡಬೇಕು ಎಂದು ಆಗ್ರಹಿಸಿದರು.
ಸಂವಿಧಾನ ಖಾತರಿಪಡಿಸಿರುವ ರಾಜ್ಯಗಳ ಹಕ್ಕಿನ ಮೇಲೆ ಆಕ್ರಮಣ ನಡೆಸುವ ಬಜೆಟ್ ಪ್ರಸ್ತಾಪಗಳನ್ನು
ಸಂಪೂರ್ಣವಾಗಿ ಕೈ ಬಿಡಬೇಕು. ತೆರಿಗೆ ಹಂಚಿಕೆಯಲ್ಲಿ ಕರ್ನಾಟಕ ಹಾಗೂ ದಕ್ಷಿಣದ ರಾಜ್ಯಗಳಿಗೆ ಆಗುತ್ತಿರುವ
ಅನ್ಯಾಯ ಹಾಗೂ ತಾರತಮ್ಯವನ್ನು ಸರಿಪಡಿಸಬೇಕು, ಐತಿ ಹಾಸಿಕ ದೆಹಲಿ ರೈತ ಹೋರಾಟದ ಮೂಲಕ ಹಿಮ್ಮೆಟ್ಟಿಸಿದ
ಕರಾಳ ಕೃಷಿ ಕಾಯ್ದೆಗಳನ್ನು, ವಿದ್ಯುತ್ ಖಾಸಗೀಕರಣ ನೀತಿಗಳನ್ನು ಕರಾಳ ಕೃಷಿ ಮಾರುಕಟ್ಟೆ ಕುರಿತ ರಾಷ್ಟ್ರೀಯ
ಧೋರಣಾ ಚೌಕಟ್ಟು ಮೂಲಕ ಹಾಗೂ ವಿದ್ಯುತ್ ವಲಯವನ್ನು ಖಾಸಗಿ ಕಾರ್ಪೊರೇಟ್ ದೈತ್ಯರಿಗೆ ವಹಿಸುವ
ಮೂಲಕ ಜಾರಿಗೆ ತರುವ ಎಲ್ಲಾ ಪ್ರಯತ್ನಗಳನ್ನು ಕೂಡಲೇ ನಿಲ್ಲಿಸಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ವಿವಿಧ ಸಂಘಟನೆಗಳ ಮುಖಂಡರುಗಳಾದ ಚಾಮರಸ ಮಾಲಿ ಪಾಟೀಲ್, ಕೆ.ಜಿ.ವೀರೇಶ,
ಹೆಚ್. ಪದ್ಮಾ, ಡಿ.ಎಸ್. ಶರಣ ಬಸವ, ಜಿಂದಪ್ಪ ವಡ್ಲೂರು, ಕೆ. ರಂಗನಾಥ ಡಿ.ರಾಂಪೂರ, ಮುದುಕಪ್ಪ, ಖಾಜಾ
ಅಸ್ಲಂ ಅಹ್ಮದ್ ಸೇರಿದಂತೆ ಅನೇಕರು ಇದ್ದರು.