

ಉಡುಪಿ: ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ ‘ವಿಜಯವಾಣಿ’ ಜಿಲ್ಲಾ ವರದಿಗಾರ ಶ್ರೀಪತಿ ಹೆಗಡೆ ಹಕ್ಲಾಡಿ ಅವರು ಈ ಬಾರಿಯ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಪತ್ರಿಕೋದ್ಯಮದಲ್ಲಿ 28 ವರ್ಷಗಳ ಅನುಭವ ಹೊಂದಿರುವ ಅವರು ವಡ್ಡರ್ಸೆ ರಘುರಾಮ ಶೆಟ್ಟಿ ಅವರ ಮುಂಗಾರು ಪತ್ರಿಕೆಯಲ್ಲಿ ಬೈಂದೂರು ವರದಿಗಾರರಾಗಿ ವೃತ್ತಿ ಬದುಕಿಗೆ ಪದಾರ್ಪಣೆ ಮಾಡಿದ್ದರು. ನಂತರ ಹಾಯ್ ಬೆಂಗಳೂರು, ಕನ್ನಡಪ್ರಭ, ಉಷಾಕಿರಣ, ಹೊಸದಿಗಂತ ಪತ್ರಿಕೆಗಳಲ್ಲಿ ಸೇವೆ ಸಲ್ಲಿಸಿ, 2012ರಿಂದ ವಿಜಯವಾಣಿ ಉಡುಪಿ ಜಿಲ್ಲಾ ವರದಿಗಾರರಾಗಿದ್ದಾರೆ.