

ಮಡಿಕೇರಿ: ಕರ್ನಾಟಕ ಸ್ಪೋರ್ಟ್ಸ್ ಡಾನ್ಸ್ ಅಸೋಸಿಯೇಷನ್ ಹಾಗೂ ಏಷ್ಯನ್ ಸ್ಪೋರ್ಟ್ಸ್ ಡಾನ್ಸ್ ಕೌನ್ಸಿಲ್ ವತಿಯಿಂದ ಇತ್ತೀಚೆಗೆ ಮಂಡ್ಯದ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ ಚಾಂಪಿಯನ್‌ಷಿಪ್‌ನಲ್ಲಿ ಕೊಡಗಿನ ವಿರಾಜಪೇಟೆಯ ನಾಟ್ಯಾಂಜಲಿ ನೃತ್ಯ ಹಾಗೂ ಸಂಗೀತ ಸಂಸ್ಥೆಯ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಶಿಕ್ಷಕಿ ಹೇಮಾವತಿ ಕಾಂತರಾಜು ಅವರ ಗರಡಿಯಲ್ಲಿ ಪಳಗಿದ ಅಮ್ಮತ್ತಿ ಕಾರ್ಮಾಡು ಗ್ರಾಮದ ಪವಿತ್ರಾ, ಗಹನ ಹಾಗೂ ಗುಹ್ಯ ಗ್ರಾಮದ ಕೌಸಲ್ಯಾ, ಶ್ರಾವ್ಯಾ ರಾಷ್ಟ್ರಮಟ್ಟದ ನಾಟ್ಯ ಸ್ಪರ್ಧೆಗೆ ಆಯ್ಕೆಯಾಗಿ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಇತ್ತೀಚೆಗೆ ಮಂಡ್ಯದಲ್ಲಿ ನಡೆದ ರಾಜ್ಯಮಟ್ಟದ ಸೋಲೋ ಡಬಲ್ಸ್ ಹಾಗೂ ಗ್ರೂಪ್ ಡಾನ್ಸ್ ಸ್ಪರ್ಧೆಯಲ್ಲಿ ಪಾಲ್ಗೊಂಡು ಪದಕಗಳನ್ನು ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಜಮ್ಮು ಕಾಶ್ಮೀರದಲ್ಲಿ ರಾಷ್ಟ್ರ ಮಟ್ಟದ ಚಾಂಪಿಯನ್‌ಷಿಪ್ ಫೆ.7ರಿಂದ ನಡೆಯಲಿದೆ.