ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಜಿಲ್ಲಾ ತಂಡಕ್ಕೆ 4 ಬೆಳ್ಳಿ, 1 ಕಂಚು

Published on

ಚಿಕ್ಕಬಳ್ಳಾಪುರ: ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಜಿಲ್ಲೆಯ ತಂಡವು 3 ಬೆಳ್ಳಿ, 1 ಕಂಚು ಪಡೆದುಕೊಂಡಿದೆ.

ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ಪುರುಷರು ಮತ್ತು ಮಹಿಳೆಯರಿಗೆ ಮತ್ತು 8, 10, 12, 14ರ ವಯೋಮಿಯ ಕಿಡ್ಸ್ ವಿಭಾಗದ ಕ್ರೀಡಾಕೂಟದಲ್ಲಿ ಜಿಲ್ಲೆಯ 60 ಕ್ರೀಡಾಪಟುಗಳು ಭಾಗವಹಿಸಿದ್ದರು. ಈ ಪೈಕಿ ಎಸ್.ದೀಕ್ಷಾ ಎತ್ತರ ಜಿಗಿತದಲ್ಲಿ ಬೆಳ್ಳಿ ಪದಕ, ಹರ್ಷನ್ ಯಾದವ್ ಶಾಟ್‌ಪಟ್‌ನಲ್ಲಿ ಬೆಳ್ಳಿ ಪದಕ, ಅಫೀರಾ ಹೆರ್‌ನೈನ್ ಬಾಲ್‌ಥ್ರೋನಲ್ಲಿ ಬೆಳ್ಳಿ ಪದಕ ಹಾಗೂ ಆರ್. ಕವನಾ ಶಾಟ್‌ಪಟ್‌ನಲ್ಲಿ ಕಂಚಿನ ಪದಕ ಪಡೆದುಕೊಂಡು ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ತಂಡದೊಮದಿಗೆ ಜಿಲ್ಲಾ ಅಥ್ಲೆಟಿಕ್ ಸಂಸ್ಥೆ ಪ್ರಧಾನ ಕಾರ್ಯದರ್ಶಿ ಮಂಚನಬಲೆ ಶ್ರೀನಿವಾಸ್ ಹಾಗೂ ಅಸೋಸಿಯೇಷನ್ ಪದಾಧಿಕಾರಿ ಎ.ಲಕ್ಷ್ಮೀಶೇಖರ್ ತೆರಳಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net