ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ಜಿಲ್ಲಾ ಪ್ರವಾಸ

7S7S7S7S
Published on

ವಿಜಯಪುರ : ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಆಧ್ಯಕ್ಷ ಸೋಮಣ್ಣ ಬೇವಿನಮರದ ಸೆ. 23 ಮತ್ತು ಸೆ. 24 ರಂದು ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

23 ರಂದು ಬೆಳಗ್ಗೆ 11 ಕ್ಕೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕರ್ನಾಟಕ ಸಂಭ್ರಮ&50 ರ ಆಚರಣೆಗೆ ಸಂಬಂಧಿಸಿದಂತೆ ಚರ್ಚೆ ನಡೆಸುವರು. ಸಂಜೆ 4 ಕ್ಕೆ ಮಹಾರಾಷ್ಟ್ರದ ಜತ್ತ ತಾಲೂಕಿನ ಗುಡ್ಡಾಪೂರದಲ್ಲಿ ವಿಜಯಪುರದ ಅಪರ ಜಿಲ್ಲಾಧಿಕಾರಿ, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರರು, ಕನ್ನಡ ಮತ್ತು ಸಂಸತಿ ಇಲಾಖೆಯ ಸಹಾಯಕ ನಿರ್ದೇಶಕರು ಹಾಗೂ ಮತ್ತಿತರರ ಅಧಿಕಾರಿಗಳೊಂದಿಗೆ ದಾನಮ್ಮ ದೇವಿ ದೇವಸ್ಥಾನದ ಸಭಾಂಗಣದಲ್ಲಿ 30 ರಂದು ನಡೆಯುವ ಕರ್ನಾಟಕ ಸಂಭ್ರಮ&50 ರ ಆಚರಣೆಗೆ ಸಂಬಂಧಿಸಿದಂತೆ ವೇದಿಕೆ ಮತ್ತು ಇತರ ವ್ಯವಸ್ಥೆಗಳ ಕುರಿತು ಸ್ಥಳ ಪರಿಶೀಲನೆ ಮತ್ತು ಪ್ರಮುಖ ಸಂ ಸಂಸ್ಥೆಗಳೊಂದಿಗೆ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸುವರು. ಸಂಜೆ 7.30 ಕ್ಕೆ ಗುಡ್ಡಾಪೂರದಿಂದ ಹೊರಟು ವಿಜಯಪುರಕ್ಕೆ ಆಗಮಿಸಿ ವಾಸ್ತವ್ಯ ಮಾಡಲಿದ್ದಾರೆ. 24 ರಂದು ಬೆಳಗ್ಗೆ 11 ಕ್ಕೆ ವಿಜಯಪುರದಿಂದ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net