ಕನ್ನಡ ಭವನ ನಿರ್ಮಾಣದಿಂದ ಹಿಂದೆ ಸರಿಯಲಿ: ಜಿಲ್ಲಾ ವಾಲಿಬಾಲ್ ಸಂಸ್ಥೆಯ ಕಾರ್ಯದರ್ಶಿ ಎಂ.ಕೆ.ಸೋಮಶೇಖರ್ ಒತ್ತಾಯ

District Volleyball Association Press Conference Mandya
Published on

ಮಂಡ್ಯ: ನಗರದ ಒಳಾಂಗಣ ಕ್ರೀಡಾಂಗಣದ ಪಕ್ಕದ ಆವರಣದಲ್ಲಿ ವಾಲಿಬಾಲ್ ಮತ್ತು ಇತರೆ ಕ್ರೀಡಾ ಚಟುವಟಿಕೆಗಳು ನಡೆಯುತ್ತಿದೆ. ಆದರೆ ಆ ಸ್ಥಳದಲ್ಲಿ ಕನ್ನಡ ಭವನ ನಿರ್ಮಾಣ ಮಾಡುವ ನಿರ್ಣಯದಿಂದ ಹಿಂದೆ ಸರಿಯಬೇಕು ಎಂದು ಜಿಲ್ಲಾ ವಾಲಿಬಾಲ್ ಸಂಸ್ಥೆಯ ಕಾರ್ಯದರ್ಶಿ ಎಂ.ಕೆ.ಸೋಮಶೇಖರ್ ಒತ್ತಾಯಿಸಿದರು.

ಜಿಲ್ಲಾಕೇಂದ್ರದಲ್ಲಿ ವಾಲಿಬಾಲ್ ಅಂಕಣ ನಿರ್ಮಿಸಲು ಒಳಾಂಗಣ ಕ್ರೀಡಾಂಗಣದ ಪಕ್ಕದ ಸ್ಥಳ ಬಿಟ್ಟರೆ ಬೇರೆ ಯಾವುದೇ ಸ್ಥಳ ಸೂಕ್ತವಾಗಿಲ್ಲ. ಆದ್ದರಿಂದ ವಾಲಿಬಾಲ್ ಕ್ರೀಡಾಪಟುಗಳಿಗೆ ಆ ಸ್ಥಳ ಮೀಸಲಿಡುವಂತೆ ಸುದ್ದಿಗೋಷ್ಠಿಯಲ್ಲಿ ಮನವಿ ಮಾಡಿದರು.

ಈಗಾಗಲೇ ಜಿಲ್ಲಾ ಕ್ರೀಡಾಂಗಣದ 400 ಮೀ ಅಂತರದಲ್ಲಿ ಕಲಾಮಂದಿರ, ಗಾಂಧಿಭವನ, ಕರ್ನಾಟಕ ಭವನ, ಶಿಕ್ಷಕರ ಭವನ ಸೇರಿದಂತೆ 7 ಭವನಗಳಿವೆ. ಕ್ರೀಡಾಂಗಣದ ವ್ಯಾಪ್ತಿಯಲ್ಲಿ ಮತ್ತೊಂದು ಭವನ ನಿರ್ಮಿಸಲು ಮುಂದಾಗಿರುವುದು ಸರಿಯಲ್ಲ. ಆ ಸ್ಥದಲ್ಲಿ ಕರ್ನಾಟಕ ಭವನ ನಿರ್ಮಿಸುವ ನಿರ್ಧಾರ ಕೈ ಬಿಡುವಂತೆ ಒತ್ತಾಯಿಸಿ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ, ಸಂಸದ ಎಚ್.ಡಿ.ಕುಮಾರಸ್ವಾಮಿ, ಶಾಸಕ ರವಿಕುಮಾರ್ ಗಣಿಗ, ಜಿಲ್ಲಾಧಿಕಾರಿ ಡಾ.ಕುಮಾರ ಅವರಿಗೆ ಪತ್ರದ ಮೂಲಕ ಮನವಿ ಮಾಡಲಾಗಿದೆ ಎಂದು ಹೇಳಿದರು.

ಸಂಸ್ಥೆಯ ಜಂಟಿ ಕಾರ್ಯದರ್ಶಿ ಸೋಮಶೇಖರ್, ಜಿಲ್ಲಾ ಜೂಡೋ ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿ ಜಿ.ಕುಬೇರ ನಾರಾಯಣ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net