ವಾಲಿಬಾಲ್ ಪಂದ್ಯಾಟ ಸಮಾರೋಪ

sports
Published on

ಮಂಜೇಶ್ವರ: ಜಿಲ್ಲಾ ವಾಲಿಬಾಲ್ ಪಂದ್ಯಾಟ ಸಮಾರೋಪ ಕೊಡ್ಲಮೊಗರು ಶ್ರೀವಾಣಿ ವಿಜಯ ಹೈಯರ್ ಸೆಕೆಂಡರಿ ಶಾಲೆಯಲ್ಲಿ ನಡೆಯಿತು. ವರ್ಕಾಡಿ ಪಂಚಾಯಿತಿ ಅಧ್ಯಕ್ಷೆ ಭಾರತಿ ಎಸ್.ಸಮಾರೋಪ ಉದ್ಘಾಟಿಸಿದರು. ಜಿಲ್ಲಾ ಶಿಕ್ಷಣಾಧಿಕಾರಿ ದಿನೇಶ ವಿ.ಪ್ರಾಸ್ತಾವಿಕವಾಗಿ ಮಾತನಾಡಿದರು.

ಯುನಿವರ್ಸಲ್ ಗ್ರೂಫ್ ಚೇರ್ಮನ್ ಅಬ್ದುಲ್ ಲತೀಫ್ ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಸ್ಪೋರ್ಟ್ಸ್ ಕೌನ್ಸಿಲ್‌ನ ಜಿಲ್ಲಾ ಕಾರ್ಡಿನೇಟರ್ ಡಾ.ಅಶೋಕ್ ಕಾರ್ಯಕ್ರಮದ ಮಾಹಿತಿ ನೀಡಿದರು. ಶಾಲಾರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಅಬ್ದುಲ್ ಮಜೀದ್ ಅಧ್ಯಕ್ಷತೆ ವಹಿಸಿದ್ದರು.

ರಕ್ಷಕ-ಶಿಕ್ಷಕ ಸಂಘದ ಉಪಾಧ್ಯಕ್ಷ ಮೋಹನ, ಎಂಪಿಟಿ ಅಧ್ಯಕ್ಷ ರಿಯಾನ, ಸದಸ್ಯರಾದ ಹಮೀದ್ ಕಣಿಯೂರ್, ಉಸ್ಮಾನ್, ಹಮೀದ್, ಡಿ.ಎಸ್.ಜಿ.ಎ. ಕಾರ್ಯದರ್ಶಿ ಸಂತೋಷ್ ಕುಮಾರ್ ಉಪಸ್ಥಿತರಿದ್ದರು. ಪ್ರಾಂಶುಪಾಲ ವಿಜಯ್ ಕುಮಾರ್ ಸ್ವಾಗತಿಸಿ, ಮುಖ್ಯಶಿಕ್ಷಕಿ ಕೃಷ್ಣವೇಣಿ ಬಿ.ವಂದಿಸಿದರು. ಸಂಧ್ಯಾ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net