

ಸುಂಟಿಕೊಪ್ಪ: ಕೊಡಗರಹಳ್ಳಿಯ ಸುಂಟಿಕೊಪ್ಪ ನಾಡು ಪ್ರೌಢಶಾಲೆಯ ವಿದ್ಯಾರ್ಥಿನಿ ಶ್ರೀಶಾ ಇತ್ತೀಚೆಗೆ ನಡೆದ ಜಿಲ್ಲಾ ಮಟ್ಟದ ಮಕ್ಕಳ ವಿಜ್ಞಾನ ಸಮಾವೇಶದಲ್ಲಿ ಜಿಲ್ಲಾ ಯುವ ವಿಜ್ಞಾನಿ ಪ್ರಶಸ್ತಿಗೆ ಭಾಜನರಾಗಿ, ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದು ಅವರಿಗೆ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು.
ಕೊಡಗರಹಳ್ಳಿಯ ಸುಂಟಿಕೊಪ್ಪ ನಾಡು ಪ್ರೌಢಶಾಲೆಯಲ್ಲಿ 59ನೇ ವಾರ್ಷಿಕೋತ್ಸವದ ಅಂಗವಾಗಿ ಮಡಿಕೇರಿಯಲ್ಲಿ ಜಿಲ್ಲಾ ಮಟ್ಟದ ಮಕ್ಕಳ ವಿಜ್ಞಾನ ಸಮಾವೇಶದಲ್ಲಿ ವೈಜ್ಞಾನಿಕ ಯೋಜನಾ ಪ್ರಬಂಧ ಮಂಡನೆಯ ವಿಷಯ, ಕಲುಷಿತಗೊಳ್ಳುತ್ತಿರುವ ನದಿ ತೀರಗಳು ವಿಚಾರದ ಕುರಿತು ಪ್ರಬಂಧ ಪ್ರಕಟಿಸಿ ಜಿಲ್ಲಾ ಯುವ ವಿಜ್ಞಾನಿ ಪ್ರಶಸ್ತಿ ತನ್ನದಾಗಿಸಿಕೊಂಡು ರಾಜ್ಯ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿನಿ ಶೀಶಾ ಅವರಿಗೆ ಗಣ್ಯರು ಪ್ರಶಸ್ತಿ ಪತ್ರ, ಬಹುಮಾನ ನೀಡಿ ಸನ್ಮಾನಿಸಿದ್ದಾರೆ. ಆ ವೇಳೆ ಜಿಲ್ಲಾ ಕಾನೂನು ಸಲಹೆಗಾರರಾದ ಎ.ಲೋಕೇಶ್‌ಕುಮಾರ್, ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಹರಪಳ್ಳಿ ರವೀಂದ್ರ, ಕೊಡಗರಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಾಗಚೆಟ್ಟೀರ ನಿರತಾ ಬೆಳ್ಳಿಯಪ್ಪ, ಸುಂಟಿಕೊಪ್ಪ ಗ್ರಾಪಂ ಉಪಾಧ್ಯಕ್ಷ ಪ್ರಸಾದ್‌ಕುಟ್ಟಪ್ಪ ಹಾಗೂ ನಿವೃತ್ತ ಮುಖ್ಯಶಿಕ್ಷಕಿ ಕೆ.ಎಸ್.ಸಾವಿತ್ರಿ ಹಾಗೂ ಶಾಲಾ ಮುಖ್ಯಶಿಕ್ಷಕಿ ಕೆ.ಎಸ್.ಇಂದಿರಾ ಇತರರಿದ್ದರು.