

ಕಾರವಾರ Youth Festival : ಇಂದಿನ ಯುವ ಪೀಳಿಗೆಯು ಮೊಬೈಲ್ ಎಂಬ ಮಾಯಾಜಾಲದಲ್ಲಿ ಮುಳುಗಿ ಹೋಗುತ್ತಿರುವುದು ಅತ್ಯಂತ ಕಳವಳ ಸಂಗತಿಯಾಗಿದೆ.ಯುವ ಜನೋತ್ಸವ ಕಾರ್ಯಕ್ರಮದ ಮೂಲಕ ಅವರಿಗೆ ನಮ್ಮ ಕಲೆ ಸಂಸ್ಕೃತಿಯನ್ನು ಪರಿಚಯಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮೀ ಪ್ರಿಯಾ ಹೇಳಿದರು.
ಅವರು ಶನಿವಾರ, ಸರಕಾರಿ ಕಲಾ ಮತ್ತು ವಿಜ್ಞಾನ ಕಾಲೇಜ್ ನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ ಮತ್ತು ಸರಕಾರಿ ಕಲಾ ಮತ್ತು ವಿಜ್ಞಾನ ಕಾಲೇಜ್, (ಸ್ವಾಯತ್ತ) ಕಾರವಾರ ಇವರ ಸಹಯೋಗದಲ್ಲಿ ಅಯೋಜಿಸಲಾದ ಉತ್ತರ ಕನ್ನಡ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಇಂದಿನ ಯುವಜನತೆ ಮೊಬೈಲ್, ಟಿವಿ ಹಾಗೂ ಅಂತರ್ಜಾಲದಲ್ಲಿ ಮುಳುಗಿ ಹೋಗುತ್ತಿದ್ದಾರೆ ಅವರಿಗೆ ನಮ್ಮ ನಾಡಿನ ಕಲೆ ,ಸಂಗೀತ, ನಾಟಕ, ಸಂಸ್ಕೃತಿಯ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಯುವಜನೋತ್ಸವ Youth Festival ಕಾರ್ಯಕ್ರಮ ಅಗತ್ಯವಾಗಿದೆ ಎಂದರು. ಯುವಕರು ಶಿಕ್ಷಣದ ಜೊತೆಯಲ್ಲಿ ಇಂತಹ ಸ್ಪರ್ಧೇಗಳಲ್ಲಿ ಭಾಗವಹಿಸುವುದರಿಂದ ಅವರಲ್ಲಿ ಉತ್ತಮ ನಡವಳಿಕೆ, ಕೌಶಲ್ಯ ಮತ್ತು ಜ್ಞಾನ ಹೆಚ್ಚಾಗುತ್ತದೆ ಎಂದರು.
ನಗರ ಸಭೆ ಅಧ್ಯಕ್ಷ ರವಿರಾಜ ಚಂದ್ರಹಾಸ ಅಂಕೋಲೆಕರ ಮಾತನಾಡಿ, ಯುವ ಜನತೆಗೆ ಸರ್ಕಾರ ಅನೇಕ ಕಾರ್ಯಕ್ರಮ ಅಯೋಜಿಸಲಾಗುತ್ತದೆ ಇಂತಹ ಕಾರ್ಯಗಳ ಪ್ರಯೋಜವನ್ನು ಪಡೆದುಕೊಳ್ಳಿ ಎಂದರು. ವಿದ್ಯಾರ್ಥಿಗಳು ಉತ್ತಮ ವಿದ್ಯಾಭ್ಯಾಸವನ್ನು ಮಾಡಿ ಉನ್ನತ ಹುದ್ದೆಯಲ್ಲಿ ಸೇವೆ ಸಲ್ಲಿಸುವಂತೆ ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.
ಜಿಲ್ಲಾಧಿಕಾರಿಗಳು ನಗರ ಸಭೆ ಉದ್ಯಾನವನದಲ್ಲಿ ಪುಸ್ತಕ ಪ್ರಿಯರಿಗೆ ಪತ್ರಿ ಭಾನುವಾರ 9 ಗಂಟೆಯಿ0ದ 11 ಗಂಟೆಯವರೆಗೆ ಕಾರವಾರ ರೀಡ್ಸ್ ಎಂಬ ವಿನೂತನ ಕಾರ್ಯಕ್ರಮ ಆಯೋಜನೆ ಮಾಡಿದ್ದು, ಈ ಕಾರ್ಯಕ್ರಮದಲ್ಲಿ ಯುವಜನತೆ ಪಾಲ್ಗೊಳ್ಳುವಂತೆ ಹೇಳಿದರು.
ಸರ್ಕಾರಿ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದ ಪ್ರಾಂಶುಪಾಲೆ ಗೀತಾ ಎಸ್ ವಾಲಿಕಾರ್ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಹುದುಗಿರುವ ಕೌಶಲ್ಯವನ್ನು ಪ್ರದರ್ಶಿಸಲು ಯುವಜನೋತ್ಸವ Youth Festival ಸೂಕ್ತ ವೇದಿಕೆವಾಗಿದೆ. ವಿವಿಧತ್ಯೆಯಲ್ಲಿ ಏಕತೆಯನ್ನು ಹೊಂದಿರುವ ದೇಶ ನಮ್ಮದಾಗಿದೆ. ಇಂದು ಇಲ್ಲಿ ವಿವಿಧ ಕೌಶಲ್ಯಗಳನ್ನು ಕಣ್ತುಂಬಿಕೊಳ್ಳಬಹುದು ಎಲ್ಲರೂ ಇದರ ಸದುಪಯೋಗ ಪಡೆದುಕೊಳ್ಳಿ ಎಂದರು.
ನೆಹರು ಯುವ ಕೇಂದ್ರದ ಸಂಘಟಕ ಲೋಕೇಶ್ ಕುಮಾರ್ ಮಾತನಾಡಿ, ಪ್ರಧಾನಿಯವರ ನೇತೃತ್ವದಲ್ಲಿ ರಾಷ್ಟಿಯ ಯುವ ಜನೋತ್ಸವ ಕಾರ್ಯಕ್ರಮವು ದೆಹಲಿಯಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸಲು my.bharat.gov.in ಮೂಲಕ ನೋಂದಯಿಸಿಕೊಂಡು ಸ್ಪರ್ಧೇಯಲ್ಲಿ ಭಾಗವಹಿಸಬಹುದಾಗಿದೆ. ಇದರ ಜೊತೆಯಲ್ಲಿ ಕ್ವಿಜ್ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು ಇದರ ಸದುಪಯೋಗವನ್ನು ಪಡೆದುಕೊಳ್ಳಿ ಎಂದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರವಿ ನಾಯಕ ಸ್ವಾಗತಿಸಿ, ಪ್ರಾಸ್ತಾವಿಕವಾಗಿ
ಮಾತನಾಡಿದರು.
ಅಣಶಿ ಸರಕಾರಿ ಪ್ರೌಢ ಶಾಲೆಯ ಶಿಕ್ಷಕ ವಿಷ್ಣು ಪಟಗಾರ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಸರ್ಕಾರಿ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದ ಪ್ರಾದ್ಯಾಪಕ ದಳವಾಯಿ, ಕಲ್ಪನಾ ರಶ್ಮಿ ಕಲಾಲೋಕ ನೃತ್ಯ ಶಾಲೆಯ ಪ್ರಾಂಶುಪಾಲ ಸೂರ್ಯ ಪ್ರಕಾಶ, ನಿರ್ಣಾಯಕರಾದ ಬಾಬುಚಂದ್ರ ನಾಯ್ಕ, ಪೂರ್ಣಿಮಾ ಶೆಟ್ಟಿ,
ಪುರುಷೀತ್ತಮ ಗೌಡ, ಬಾಲನ ಗೌಡ ಪಾಟೀಲ, ವಿನುತಾ ಅಂಬೆಕರ್, ಸಂಗೀತಾ ಬಾಂದೇಕರ್, ಸಂತೋಷ್ ಶೇಟ್, ಡಾ. ಬಸವರಾಜ್ ದಳವಾಹಿ, ರಾಮ ನಾಯ್ಕ, ಡಾ. ಎಮ್ ಡಿ ಪಯಾಜ್, ಪ್ರಜ್ಞಾ ಬಾಂದೇಕರ್, ಡಾ. ಮಹೇಂದ್ರ ಕುಮಾರ, ಡಾ, ಜ್ಯೋತಿ ಕಿಣಿ, ಘಟಕಾಂಬಳೆ, ಅನಿಲ್ ಮಡಿವಾಳ್, ರಿತೇಶ್ ಆಚಾರಿ, ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಇತರರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಿವಿಧ ವಿಭಾಗದಲ್ಲಿ ಸ್ಪರ್ಧೆಗಳು ನಡೆದವು ವಿಜೇತರಿಗೆ ಬಹುಮಾನ ವಿತರಿಸಲಾಯಿತು.