

ಹುಬ್ಬಳ್ಳಿ: ಮೈನಿಂಗ್ ಮೊಬೈಲ್ ಅಪ್ಲಿಕೇಷನ್‌ನಲ್ಲಿ ಹಣ ಹೂಡಿಕೆ ಮಾಡಿದರೆ ಲಾಭ ಗಳಿಸಬಹುದೆಂದು ನಂಬಿಸಿದ ವಂಚಕರು, ಧಾರವಾಡದ ಮಹಿಳೆಯೊಬ್ಬರಿಂದ ಬರೋಬ್ಬರಿ 4.38 ಲಕ್ಷ ರೂ. ವರ್ಗಾಯಿಸಿಕೊಂಡು ವಂಚಿಸಿದ್ದಾರೆ.
180 ದಿನಗಳವರೆಗೆ ಹೂಡಿಕೆ ಮಾಡಿದರೆ ಹೆಚ್ಚು ಲಾಭಾಂಶ ನೀಡುತ್ತೇವೆಂದು ನಂಬಿಸಿ ಮೊದಲು ಲಾಭ ಕೊಟ್ಟಿದ್ದಾರೆ. ನಂತರ ವಿವಿಧ ಬ್ಯಾಂಕ್ ಖಾತೆಯಿಂದ ಒಟ್ಟು 4,38,689 ಲಕ್ಷ ರೂ. ಆನ್‌ಲೈನ್ ಮೂಲಕ ವರ್ಗಾಯಿಸಿಕೊಂಡು ಮೋಸ ಮಾಡಿದ್ದಾರೆ. ಸಿಇಎನ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.