ಅ.1 ಮತ್ತು 2ರಂದು ಉಡುಪಿಯಲ್ಲಿ ದಸರಾ ಕ್ರೀಡಾಕೂಟ: ಒಂಭತ್ತು ಸ್ಪರ್ಧೆಗಳ ಆಯೋಜನೆ

sports1
Published on

ಮಂಡ್ಯ: ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟದ ಫುಟ್ಬಾಲ್, ವಾಲಿಬಾಲ್, ಖೋ-ಖೋ, ಕಬಡ್ಡಿ, ಬ್ಯಾಡಿಂಟನ್, ಟೇಬಲ್ ಟೆನ್ನಿಸ್, ಟೆನ್ನಿಸ್, ಈಜು ಮತ್ತು ಜೂಡೋ ಸ್ಪರ್ಧೆಗಳು ಅ.1 ಮತ್ತು 2ರಂದು ಉಡುಪಿ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಿ ವೈಯಕ್ತಿಕ ಸ್ಪರ್ಧೆಯಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದವರು ಹಾಗೂ ಗುಂಪು ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದವರು ಮಾತ್ರ ವಿಭಾಗ ಮಟ್ಟದಲ್ಲಿ ಭಾಗವಹಿಸಲು ಅರ್ಹರಾಗಿರುತ್ತಾರೆ. ಅರ್ಹರು ಸ್ಪರ್ಧೆ ನಡೆಯುವ ದಿನಾಂಕದಂದು ಬೆಳಗ್ಗೆ 9ಗಂಟೆಯೊಳಗೆ ಸಂಘಟಕರಲ್ಲಿ ವರದಿ ಮಾಡಿಕೊಳ್ಳಬಹುದು. ಜೂಡೋ ಸ್ಫರ್ಧೆಯಲ್ಲಿ ಭಾಗವಹಿಸುವವರು ಕೂಡ ನೇರವಾಗಿ ವಿಭಾಗ ಮಟ್ಟದಲ್ಲಿ ಸ್ಪರ್ಧಿಸಬಹುದಾಗಿದೆ.

ಸ್ಪರ್ಧಿಗಳು ಕಡ್ಡಾಯವಾಗಿ ಇತ್ತೀಚಿನ ಭಾವಚಿತ್ರ, ಆಧಾರ್‌ಕಾರ್ಡ್‌ನ ನಕಲು ಪ್ರತಿಯೊಂದಿಗೆ ಇಲಾಖೆಯಿಂದ ನೀಡಲಾಗುವ ಅಕ್ರಿಡೆಷನ್ ಫಾರ್ಮ್ ಅನ್ನು ಪಡೆದುಕೊಂಡು ನೋಂದಣಿ ಸಮಯದಲ್ಲಿ ಹಾಜರುಪಡಿಸಬೇಕು. ಮಾಹಿತಿಗೆ ಮೊ.ಸಂ 97408 96699 ಅಥವಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕಚೇರಿಯನ್ನು ಸಂಪರ್ಕಿಸಬಹುದೆಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net